ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಟಾಲಿವುಡ್ ನಟ ಅಲ್ಲು ಅರ್ಜುನ್ ನೆಗಿಟಿವ್ ವರದಿ ಬರುತ್ತಿದ್ದಂತೆ ತಮ್ಮ ಮಕ್ಕಳನ್ನು ಮುದ್ದಾಡಿದ್ದಾರೆ.
ಕಳೆದ 15 ದಿನಗಳ ಹಿಂದೆ ಕೊರೊನಾ ಸೋಂಕಿನಿಂದಾಗಿ ಟಾಲಿವುಡ್ ನಟ ಅಲ್ಲು ಅರ್ಜುನ್ ಕ್ವಾರಂಟೈನ್ ಆಗಿದ್ದರು. ಮನೆಯಲ್ಲೇ ಚಿಕಿತ್ಸೆ ಪಡೆದು ಈಗ ಗುಣಮುಖರಾಗಿರುವ ನಟ ಅಲ್ಲು ಅರ್ಜುನ್ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು ವರದಿ ನೆಗೆಟಿವ್ ಬಂದಿದೆ. 15 ದಿನಗಳ ನಂತರ ನಟ ತಮ್ಮ ಮಕ್ಕಳು ಹಾಗೂ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈ ವಿಷಯವನ್ನು ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡು ಮಕ್ಕಳನ್ನು ಮುದ್ದಾಡಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತಂದೆಯನ್ನು 15 ದಿನಗಳ ನಂತರ ಕಂಡ ಮಗ, ಮಗಳು ಅಪ್ಪಿಕೊಂಡು ಮುದ್ದಾಡಿದ್ದಾನೆ. ಅಲ್ಲು ಸಹ ಖುಷಿಯಿಂದ ಮಕ್ಕಳೊಂದಿಗೆ ಕುಣಿದಾಡಿದ್ದಾರೆ. ಮಕ್ಕಳನ್ನು ಅಪ್ಪಿ ಮುದ್ದಾಡಿದ್ದಾರೆ. ಈ ಸುಂದರ ಕ್ಷಣವನ್ನು ವೀಡಿಯೋ ಮಾಡಲಾಗಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.