ಪೊಲಾರ್ಡ್ – ಎಬಿಡಿ ನಡುವೆ ಭಾರೀ ಪೈಪೋಟಿ

Date:

ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉಳಿದ 31 ಪಂದ್ಯಗಳು ಇಂಗ್ಲೆಂಡ್ ಅಥವಾ ಯುಎಇಯಲ್ಲಿ ನಡೆಯುವ ಸಾಧ್ಯತೆಗಳಿವೆ.

 

 

ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಎಬಿ ಡಿವಿಲಿಯರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡದ ಪರ ಕೀರನ್ ಪೊಲಾರ್ಡ್ ಅಬ್ಬರದ ಬ್ಯಾಟಿಂಗ್ ಮಾಡಿ ಮಿಂಚಿದರು. ಟೂರ್ನಿಯಲ್ಲಿ ಕೀರನ್ ಪೊಲಾರ್ಡ್ 13 ಆಕರ್ಷಕ ಸಿಕ್ಸರ್ ಬಾರಿಸಿ ಮಿಂಚಿದರೆ, ಎಬಿ ಡಿವಿಲಿಯರ್ಸ್ 10 ಸಿಕ್ಸರ್ ಸಿಡಿಸಿ ಮಿಂಚಿದರು. ಇಬ್ಬರೂ ಸಹ ಡೆತ್ ಓವರ್‌ಗಳಲ್ಲಿ ಅಬ್ಬರಿಸುವ ಅಕ್ರಮಣಕಾರಿ ಆಟಗಾರರಾಗಿರುವುದರಿಂದ ಕೊನೆಯ ಓವರ್‌ಗಳಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ.

 

ಡೆತ್ ಓವರ್‌ಗಳ ಹಲವು ದಾಖಲೆಗಳ ಪೈಕಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಕೂಡ ಒಂದು. 2020ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ಡೆತ್ ಓವರ್‌ಗಳಲ್ಲಿ ( ಕೊನೆಯ 5 ಓವರ್‌ಗಳು) ಅತಿಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 26 ಸಿಕ್ಸರ್ ಬಾರಿಸುವ ಮೂಲಕ ಕೀರನ್ ಪೊಲಾರ್ಡ್ ಅಗ್ರಸ್ಥಾನ ಪಡೆದುಕೊಂಡಿದ್ದಾರೆ ಮತ್ತು ಎಬಿ ಡಿವಿಲಿಯರ್ಸ್ 24 ಸಿಕ್ಸರ್ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಇಬ್ಬರ ನಡುವೆಯೂ ಕೇವಲ 2 ಸಿಕ್ಸರ್ ಅಂತರ ಮಾತ್ರವಿದ್ದು ಸೆಪ್ಟೆಂಬರ್‌ನಲ್ಲಿ ಐಪಿಎಲ್ ಮುಂದುವರೆದರೆ ಈ ದಾಖಲೆಯಲ್ಲಿ ಇಬ್ಬರಿಗೂ ಸಹ ಪೈಪೋಟಿ ಏರ್ಪಡಲಿದೆ. ಪೊಲಾರ್ಡ್ ಮತ್ತು ಡಿ ವಿಲಿಯರ್ಸ್ ಹೊರತುಪಡಿಸಿ 2020ರ ಐಪಿಎಲ್ ಟೂರ್ನಿಯಿಂದೀಚೆಗೆ ಡೆತ್ ಓವರ್‌ಗಳಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿರುವ ಅಟಗಾರರೆಂದರೆ : ಹಾರ್ದಿಕ್ ಪಾಂಡ್ಯ 20, ರಾಹುಲ್ ತೆವಾಟಿಯ 17 ಹಾಗೂ ರವೀಂದ್ರ ಜಡೇಜಾ 16 ಸಿಕ್ಸರ್.

 

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...