ಈ ಮೂವರು ಟೀಮ್ ಇಂಡಿಯಾ ಪರ ಮಿಂಚಲಿದ್ದಾರೆ : ಸಂಗಕ್ಕಾರ

admin
1 Min Read

ಏಪ್ರಿಲ್ 9ರಂದು ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉಳಿದ 31 ಪಂದ್ಯಗಳು ಇಂಗ್ಲೆಂಡ್ ಅಥವಾ ಯುಎಇಯಲ್ಲಿ ನಡೆಯಲಿವೆ ಎಂಬ ಸುದ್ದಿ ಹರಿದಾಡುತ್ತಿದೆ.

 

 

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ್ ಸಂಗಕ್ಕಾರ ಇದೀಗ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಆಟವನ್ನು ಆಡುವುದರ ಮೂಲಕ ಭರವಸೆ ಮೂಡಿಸಿರುವ ಅನ್‌ಕ್ಯಾಪ್ಡ್ ಆಟಗಾರರ ಪೈಕಿ 3 ಆಟಗಾರರು ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾದಲ್ಲಿ ಮಿಂಚಲಿದ್ದಾರೆ ಎಂದು ತಿಳಿಸಿದ್ದಾರೆ. ಕುಮಾರ್ ಸಂಗಕ್ಕಾರ ಹೆಸರಿಸಿದ ಆ ಮೂವರು ಅನ್‌ಕ್ಯಾಪ್ಡ್ ಆಟಗಾರರು ಯಾರೆಂಬುದು ಮುಂದೆ ಇದೆ ನೋಡಿ.

 

 

ರಾಜಸ್ಥಾನ್ ರಾಯಲ್ಸ್ ತಂಡದ ರಿಯಾನ್ ಪರಾಗ್ ಒಬ್ಬ ಅತ್ಯದ್ಭುತ ಆಲ್ ರೌಂಡರ್ ಆಗಿದ್ದು ಭವಿಷ್ಯದಲ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಆಲ್ ರೌಂಡರ್ ಆಗುವ ಎಲ್ಲ ಲಕ್ಷಣಗಳನ್ನು ಹೊಂದಿದ್ದಾರೆ ಹಾಗೂ ಯುವ ಆಟಗಾರ ಚೇತನ್ ಸಕಾರಿಯಾ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಪ್ರಮುಖ ವಿಕೆಟ್‍ಗಳನ್ನು ಪಡೆದುಕೊಂಡು ಮಿಂಚಿದ್ದು ಭವಿಷ್ಯದಲ್ಲಿ ಟೀಮ್ ಇಂಡಿಯಾ ಪರ ಪ್ರಮುಖ ಬೌಲರ್ ಆಗಲಿದ್ದಾರೆ ಮತ್ತು ಅನ್‌ಕ್ಯಾಪ್ಡ್ ಆಟಗಾರ ಯಶಸ್ವಿ ಜೈಸ್ವಾಲ್ ಕೂಡ ಭಾರತ ತಂಡವನ್ನು ಮುಂದಿನ ದಿನಗಳಲ್ಲಿ ಪ್ರತಿನಿಧಿಸಿ ಉತ್ತಮ ಆಟಗಾರ ಎನಿಸಿಕೊಳ್ಳಲಿದ್ದಾರೆ ಎಂದು ಕುಮಾರ್ ಸಂಗಕ್ಕಾರ ಭವಿಷ್ಯ ನುಡಿದರು.

Share This Article
Leave a Comment