ಕೊರೊನಾ ಸಾವಿನಲ್ಲಿ ದಾಖಲೆ!

Date:

ಕೊರೊನಾ ವೈರಸ್ ಎರಡನೇ ಅಲೆಯ ಹೊಡೆತಕ್ಕೆ ತತ್ತರಿಸಿರುವ ಭಾರತ ದೇಶದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಮುಖವಾಗುತ್ತಿದೆ. ಈ ಸಮಾಧಾನಕರ ಸಂಗತಿಯ ನಡುವಲ್ಲೇ, ಸಾವಿನ ಸಂಖ್ಯೆ ಏರುತ್ತಿರುವುದು ಕಳವಳ ಮೂಡಿಸಿದೆ. ದೇಶಾದ್ಯಂತ 24 ಗಂಟೆಗಳ ಅವಧಿಯಲ್ಲಿ ಒಟ್ಟು 4,529 ಸೋಂಕಿತರು ಮೃತಪಟ್ಟಿದ್ದಾರೆ. ಇದು ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ.

ದೇಶಾದ್ಯಂತ ಸದ್ಯ 32,01,771 ಸಕ್ರಿಯ ಪ್ರಕರಣಗಳಿವೆ. ಈ ನಡುವೆ ಹೆಚ್ಚೆಚ್ಚು ಮಂದಿ ಸೋಂಕಿನಿಂದ ಚೇತರಿಕೆ ಕಂಡು ಡಿಸ್ಚಾರ್ಚ್ ಆಗುತ್ತಿದ್ದು, ಚೇತರಿಕೆ ಪ್ರಮಾಣ ಸರಾಸರಿಯಾಗಿ ಶೇ.86.23ಕ್ಕೆ ಏರಿಕೆ ಕಂಡಿದೆ. ಆದರೆ ಸಾವಿನ ಪ್ರಮಾಣ ಮಾತ್ರ ದಾಖಲೆ ಮಟ್ಟಕ್ಕೆ ತಲುಪಿ ಆತಂಕ ಮೂಡಿಸಿದೆ.

ಒಟ್ಟಾರೆಯಾಗಿ ದೇಶದಲ್ಲಿಇದುವರೆಗೂ 2.84 ಲಕ್ಷ ಮಂದಿ ಕೊರೊನಾದಿಂದಾಗಿ ಮೃತರಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಒ) ಅಧ್ಯಯನದ ಪ್ರಕಾರ ಕಳೆದೊಂದು ವಾರದಲ್ಲಿ ಜಗತ್ತಿನಲ್ಲೇ ಅತಿಹೆಚ್ಚು ಕೊರೊನಾ ಸೋಂಕಿತರು ಭಾರತದಲ್ಲಿ ಮೃತರಾಗಿದ್ದಾರೆ.

ಮಂಗಳವಾರದಿಂದ ಬುಧವಾರ ಬೆಳಗ್ಗೆವರೆಗೆ ಗಮನಿಸಿದಲ್ಲಿ ಮಹಾರಾಷ್ಟ್ರದಲ್ಲಿ ಅತಿಹೆಚ್ಚು, ಅಂದರೆ 1,291 ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ. ಎರಡನೇ ಸ್ಥಾನದಲ್ಲಿಕರ್ನಾಟಕ ಇದ್ದು, 24 ಗಂಟೆಗಳಲ್ಲಿ 525 ಸೋಂಕಿತರು ಸಾವನ್ನಪ್ಪಿದ್ದಾರೆ. ಮೂರನೇ ಸ್ಥಾನದಲ್ಲಿ ತಮಿಳುನಾಡು ಇದ್ದು, 364 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಸಾವಿನ ಪ್ರಮಾಣದಲ್ಲಿ ದಾಖಲೆ ವರದಿಯಾದ ಬೆನ್ನಿಗೇ ಕೊರೊನಾ ಸೋಂಕಿತರ ಪತ್ತೆಗಾಗಿ ದೇಶಾದ್ಯಂತ ನಡೆಸಲಾಗುತ್ತಿರುವ ತಪಾಸಣೆಯಲ್ಲೂ ಹೊಸ ದಾಖಲೆ ಬರೆಯಲಾಗಿದೆ. ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಯಾದ 24 ಗಂಟೆ ಅವಧಿಯಲ್ಲಿ 20 ಲಕ್ಷಕ್ಕೂ ಅಧಿಕ ಜನರನ್ನು ಕೊರೊನಾ ಸೋಂಕಿನ ಪತ್ತೆಯ ಪರೀಕ್ಷೆ ಒಳಪಡಿಸಲಾಗಿದೆ. ಇದು ಜಾಗತಿಕವಾಗಿ ಏಕದಿನ ದಾಖಲೆ ಎನಿಸಿದೆ. ನಿತ್ಯದ ಪಾಸಿಟಿವಿಟಿ ಪ್ರಮಾಣ ಶೇ.13.31ಕ್ಕೆ ಇಳಿಕೆಯಾಗಿದೆ. ಸತತ ಆರು ದಿನಗಳಿಂದಲೂ ಹೊಸ ಸೋಂಕಿತರಿಗಿಂತ ನಿತ್ಯ ಚೇತರಿಕೆ ಕಾಣುತ್ತಿರುವವರ ಸಂಖ್ಯೆಯೇ ಹೆಚ್ಚಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...