ಜಾಗ ಯಾವುದೇ ಆದ್ರೂ ಬಿಡಲ್ಲ; ನ್ಯೂಜಿಲೆಂಡ್ ಗೆ ಪೂಜಾರ ವಾರ್ನಿಂಗ್

Date:

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಬಿಸಿಸಿಐ ಈಗಾಗಲೇ 20 ಆಟಗಾರರ ಭಾರತ ತಂಡವನ್ನು ಪ್ರಕಟಿಸಿದೆ. ಅತ್ತ 20 ಆಟಗಾರರನ್ನೊಳಗೊಂಡ ನ್ಯೂಜಿಲೆಂಡ್ ತಂಡ ಈಗಾಗಲೇ ಇಂಗ್ಲೆಂಡ್ ತಲುಪಿದೆ.

ಈ ನಡುವೆ ಭಾರತ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿ ಕುರಿತು ಮಾತನಾಡಿದ್ದಾರೆ. ಕಳೆದ ಬಾರಿ ಆಸ್ಟ್ರೇಲಿಯ ವಿರುದ್ಧ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳನ್ನು ಜಯಗಳಿಸುವುದರ ಮೂಲಕ ಟೀಮ್ ಇಂಡಿಯಾ ತನ್ನ ಬಲಿಷ್ಠತೆಯನ್ನು ತೋರಿಸಿತ್ತು. ಈ ಎರಡೂ ಸರಣಿಗಳಲ್ಲಿ ಭಾರತದ ಪರ ಚೇತೇಶ್ವರ ಪೂಜಾರ ಉತ್ತಮ ಪ್ರದರ್ಶನವನ್ನು ನೀಡಿ ಮಿಂಚಿದ್ದರು.

 

 

ಇದೀಗ ಮುಂಬರುವ ಟೆಸ್ಟ್ ಪಂದ್ಯಗಳ ಕುರಿತು ಮಾತನಾಡಿರುವ ಚೇತೇಶ್ವರ್ ಪೂಜಾರ ನ್ಯೂಜಿಲೆಂಡ್ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ‘ನಮ್ಮ ತಂಡ ತನ್ನದೇ ಆದ ಸಾಮರ್ಥ್ಯವನ್ನು ಹೊಂದಿದೆ, ಆ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನವನ್ನು ನೀಡಿದರೆ ಯಾವುದೇ ತಂಡದ ವಿರುದ್ಧವಾಗಲಿ ಹಾಗೂ ಯಾವುದೇ ದೇಶದಲ್ಲಾಗಲಿ ನಾವು ಗೆಲುವನ್ನು ಸಾಧಿಸುತ್ತೇವೆ’ ಎಂದು ಚೇತೇಶ್ವರ್ ಪೂಜಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನೂ ಮುಂದುವರೆದು ಮಾತನಾಡಿದ ಅವರು ಟೀಮ್ ಇಂಡಿಯಾ ಇತ್ತೀಚೆಗೆ ನಡೆದ ಟೆಸ್ಟ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿ ಜಯಗಳಿಸಿದೆ, ಹೀಗಾಗಿ ತಂಡದಲ್ಲಿನ ಎಲ್ಲಾ ಆಟಗಾರರಿಗೂ ಉತ್ತಮ ಅನುಭವವಿದ್ದು ಮುಂಬರುವ ಪಂದ್ಯಗಳ ಲ್ಲಿಯೂ ಸಹ ಗೆಲುವು ಸಾಧಿಸುತ್ತೇವೆ ಎಂದು ಪೂಜಾರಾ ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....