ದ್ರಾವಿಡ್ ಕೋಚ್ ಆಗುವ ಬಗ್ಗೆ ಪಾಕ್ ಮಾಜಿ ಕ್ಯಾಪ್ಟನ್ ಹೇಳಿದ್ದೇನು?

Date:

ಸೀಮಿತ ಓವರ್‌ಗಳ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಲಿರುವ ಭಾರತ ತಂಡಕ್ಕೆ ರಾಹುಲ್‌ ದ್ರಾವಿಡ್‌ ಅವರನ್ನು ಕೋಚ್‌ ಆಗಿ ನೇಮಕ ಮಾಡುವುದು ‘ಅದ್ಭುತ, ಆಸಕ್ತದಾಯಕ ಉಪಾಯ’ ಎಂದು ಪಾಕಿಸ್ತಾನ ಮಾಜಿ ನಾಯಕ ಇಂಝಮಾಮ್ ಉಲ್ ಹಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಪೈನಲ್‌ ಹಾಗೂ ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟೆಸ್ಟ್‌ ಸರಣಿಗಾಗಿ ವಿರಾಟ್‌ ಕೊಹ್ಲಿ ನಾಯಕತ್ವದ ಟೀಮ್‌ ಇಂಡಿಯಾ ನಾಲ್ಕು ತಿಂಗಳ ಸುದೀರ್ಘ ಪ್ರವಾಸ ಕೈಗೊಳ್ಳಲಿದೆ. ಮುಖ್ಯ ಕೋಚ್‌ ರವಿಶಾಸ್ತ್ರಿ ಕೂಡ ಇಂಗ್ಲೆಂಡ್‌ಗೆ ತೆರಳುತ್ತಿದ್ದಾರೆ . ಹಾಗಾಗಿ, ಭಾರತ ಬಿ ತಂಡವನ್ನು ಲಂಕಾ ಪ್ರವಾಸಕ್ಕೆ ಕಳುಹಿಸಿಕೊಡುತ್ತಿದ್ದು, ಪ್ರತ್ಯೇಕವಾಗಿ ದ್ರಾವಿಡ್‌ ಅವರನ್ನು ಕೋಚ್‌ ಆಗಿ ನೇಮಿಸುವ ಸಾಧ್ಯತೆ ಇದೆ.

ಶ್ರೀಲಂಕಾ ಪ್ರವಾಸ ಮಾಡುವ ಭಾರತ ತಂಡಕ್ಕೆ ರಾಹುಲ್‌ ದ್ರಾವಿಡ್‌ ಮುಖ್ಯ ಕೋಚ್‌ ಆಗಿ ನೇಮಿಸುತ್ತಿರುವ ಅತ್ಯುತ್ತಮ ಆಯ್ಕೆ. ಏಕೆಂದರೆ, ಭಾರತ ಕಿರಿಯರ ತಂಡದಲ್ಲಿ ದ್ರಾವಿಡ್‌ ಸಾಕಷ್ಟು ಕಾರ್ಯ ನಿರ್ವಹಿಸಿದ್ದಾರೆ. ಆ ಮೂಲಕ ಹಲವು ಪ್ರತಿಭಾವಂತ ಆಟಗಾರರನ್ನು ಮ್ಯಾಚ್‌ ವಿನ್ನರ್‌ಗಳಾಗಿ ತಯಾರು ಮಾಡಿದ್ದಾರೆ ಎಂದು ಇಂಝಮಾಮ್‌ ತಮ್ಮ ಯೂಟ್ಯೂಬ್‌ ಚಾನೆಲ್‌ಲ್ಲಿ ತಿಳಿಸಿದ್ದಾರೆ.

“ಈ ಹಿಂದೆಯೂ ಇದೇ ಮಾತನ್ನು ನಾನು ಹೇಳಿದ್ದೆ… 19 ವಯೋಮಿತಿ ತಂಡಕ್ಕೆ ಮುಖ್ಯ ಕೋಚ್‌ ಆಗಿದ್ದಾಗ ರಾಹುಲ್‌ ದ್ರಾವಿಡ್‌ ಹಲವಾರು ಯುವ ಪ್ರತಿಭೆಗಳನ್ನು ಭಾರತೀಯ ಕ್ರಿಕೆಟ್‌ಗೆ ಕೊಡುಗೆ ನೀಡಿದ್ದರು. ಇದೀಗ ಆ ಆಟಗಾರರು ಟೀಮ್‌ ಇಂಡಿಯಾಗೆ ನಿಯಮಿತ ಆಟಗಾರರಾಗಿದ್ದಾರೆ. ಶ್ರೀಲಂಕಾ ಪ್ರವಾಸ ಮಾಡುವ ಭಾರತ ತಂಡಕ್ಕೆ ರಾಹುಲ್‌ ದ್ರಾವಿಡ್‌ ಮುಖ್ಯ ಕೋಚ್‌ ಆಗುವ ವಿಷಯವನ್ನು ಕೇಳಿದ್ದೇನೆ. ಇದು ನಿಜಕ್ಕೂ ಅದ್ಭುತ, ಆಸಕ್ತದಾಯಕ ಉಪಾಯ,” ಎಂದು ಇಂಝಮಾಮ್‌ ಹೇಳಿದರು.

ರಾಹುಲ್‌ ದ್ರಾವಿಡ್‌ ಪ್ರಸ್ತುತ ಬೆಂಗಳೂರಿನಲ್ಲಿರುವ ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಅವರು ಭಾರತ ‘ಎ’ ಹಾಗೂ 19 ವಯೋಮಿತಿ ಭಾರತ ತಂಡಕ್ಕೆ ಕೋಚ್‌ ಆಗಿದ್ದರು. 2018ರಲ್ಲಿ ರಾಹುಲ್‌ ದ್ರಾವಿಡ್‌ ಕೋಚ್‌ ಆಗಿದ್ದ ಅವಧಿಯಲ್ಲಿ ಪೃಥ್ವಿ ಶಾ ನಾಯಕತ್ವದಲ್ಲಿ ಭಾರತ 19 ವಯೋಮಿತಿ ತಂಡ ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

ಇತ್ತೀಚೆಗೆ ಆಸ್ಟ್ರೇಲಿಯಾ ನೆಲದಲ್ಲಿ ಭಾರತ ತಂಡ ಸತತ ಎರಡನೇ ಬಾರಿ ಬಾರ್ಡರ್‌-ಗವಾಸ್ಕರ್ ಟ್ರೋಫಿ ಮುಡಿಗೇರಿಸಿಕೊಂಡ ಬಳಿಕ ಹಲವು ಆಟಗಾರರು ರಾಹುಲ್‌ ದ್ರಾವಿಡ್‌ ಅವರ ಪಾತ್ರವನ್ನು ಸ್ಮರಿಸಿಕೊಂಡಿದ್ದರು. ಅಲ್ಲದೆ, ವಿಶ್ವದ ಹಲವು ಮಾಜಿ ಆಟಗಾರರು ಕೂಡ ಆಸ್ಟ್ರೇಲಿಯಾ ನೆಲದಲ್ಲಿ ಟೀಮ್‌ ಇಂಡಿಯಾದ ಸಾಧನೆಯ ಹಿಂದೆ ದ್ರಾವಿಡ್‌ ಕೊಡುಗೆ ಬಹಳಷ್ಟು ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

 

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...