ಧೋನಿ ಸಹಾಯ ನೆನೆದ ದೀಪಕ್ ಚಾಹರ್

Date:

ಟೀಮ್ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಕುರಿತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ದೀಪಕ್ ಚಹರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ತಾನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಕಾರಣ ಎಂಎಸ್ ಧೋನಿ ಎಂದು ದೀಪಕ್ ಚಾಹರ್ ಹೇಳಿಕೊಂಡಿದ್ದಾರೆ.


ಕಳೆದ ಬಾರಿ ಯುಎಇಯಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತ್ತು. ಚೆನ್ನೈ ತಂಡದ ಬೌಲರ್ ದೀಪಕ್ ಚಹರ್ ಕೂಡ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಲಿಲ್ಲ. ಆದರೆ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಪ್ರಮುಖ ವಿಕೆಟ್‍ಗಳನ್ನು ಪಡೆದುಕೊಂಡು ಯಶಸ್ವಿ ಪ್ರದರ್ಶನ ನೀಡಿರುವ ದೀಪಕ್ ಚಾಹರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

‘ಎಂಎಸ್ ಧೋನಿ ನಾಯಕತ್ವದಲ್ಲಿ ಆಟವನ್ನಾಡಲು ನನಗೆ ತುಂಬಾ ಉತ್ಸಾಹವೆನಿಸುತ್ತದೆ, ಈಗಾಗಲೇ ನಾನು ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ನಿಜ ಹೇಳಬೇಕೆಂದರೆ ಧೋನಿ ನಾಯಕತ್ವದಲ್ಲಿ ನನ್ನ ಆಟವನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋದೆ, ಜವಾಬ್ದಾರಿಗಳನ್ನು ಹೇಗೆ ನಿಭಾಯಿಸಬೇಕೆಂದು ಧೋನಿ ನೀಡಿದ ಸಲಹೆಯ ಮೇರೆಗೆ ಕಲಿತೆ. ನನ್ನ ಮೇಲೆ ನಂಬಿಕೆ ಇಟ್ಟು ಬೌಲಿಂಗ್‌ ಮಾಡುವ ಅವಕಾಶವನ್ನು ನೀಡುತ್ತಿದ್ದರು, ಪ್ರಸ್ತುತ ಟೂರ್ನಿಯಲ್ಲಿ ನನ್ನ ಉತ್ತಮ ಪ್ರದರ್ಶನಕ್ಕೆ ಧೋನಿ ನನ್ನ ಮೇಲಿಟ್ಟಿದ್ದ ನಂಬಿಕೆಯೇ ಕಾರಣ’ ಎಂದು ದೀಪಕ್ ಚಾಹರ್ ಹೇಳಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...