ಟೀಮ್ ಇಂಡಿಯಾದಲ್ಲಿ ಪ್ರತಿಭಾವಂತರಿಗಿಲ್ಲ ಸ್ಥಾನ: ಉನಾದ್ಕತ್

Date:

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಹಾಗೂ ಈ ಪಂದ್ಯ ಮುಗಿದ ಬೆನ್ನಲ್ಲೇ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಭಾರತ ತಂಡ ಆಡಲಿದೆ. ಹೀಗಾಗಿ ಈ ಎರಡೂ ಸರಣಿಗಳಿಗೂ ಸೇರಿ ಬಿಸಿಸಿಐ 20 ಸದಸ್ಯರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ.


ಈ ಕುರಿತು ಇದೀಗ ಸೌರಾಷ್ಟ್ರ ತಂಡದ ಆಟಗಾರ ಜಯದೇವ್ ಉನಾದ್ಕತ್ ಮಾತನಾಡಿದ್ದು ಬೇಸರ ವ್ಯಕ್ತಪಡಿಸಿದ್ದಾರೆ. 2019-20ನೇ ಸಾಲಿನ ರಣಜಿ ಟ್ರೋಫಿಯಲ್ಲಿ ಜಯದೇವ್ ಉನಾದ್ಕತ್ ನಾಯಕತ್ವದ ಸೌರಾಷ್ಟ್ರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆ ಟೂರ್ನಿಯಲ್ಲಿ ಜಯದೇವ್ ಉನಾದ್ಕತ್ 10 ಪಂದ್ಯಗಳಲ್ಲಿ 67 ವಿಕೆಟ್‍ಗಳನ್ನು ಪಡೆದು ಮಿಂಚಿದ್ದರು. ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಜಯದೇವ್ ಉನಾದ್ಕತ್ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ ಎಂಬ ಸುದ್ದಿ ಇತ್ತು ಆದರೆ ತಂಡ ಪ್ರಕಟವಾದಾಗ ಜಯದೇವ್ ಉನದ್ಕತ್ ಅವರ ಹೆಸರಿರಲಿಲ್ಲ.

ಈ ಕುರಿತು ಬೇಸರ ವ್ಯಕ್ತಪಡಿಸಿರುವ ಉನಾದ್ಕತ್ ‘ಈ ಬಾರಿಯ ಇಂಗ್ಲೆಂಡ್ ಪ್ರವಾಸಕ್ಕೆ ನನ್ನ ಹೆಸರನ್ನು ಆಯ್ಕೆ ಮಾಡುತ್ತಾರೆ ಎಂದು ಕಾದಿದ್ದೆ, ಆದರೆ ಈ ಬಾರಿಯೂ ನನಗೆ ನಿರಾಸೆ ಉಂಟಾಗಿದೆ. ಕಳೆದ ರಣಜಿ ಟ್ರೋಫಿಯಲ್ಲಿ 67 ವಿಕೆಟ್ ಪಡೆದು ಉತ್ತಮ ಪ್ರದರ್ಶನವನ್ನು ನೀಡಿದ್ದೆ, ಆದರೆ 2020 ಐಪಿಎಲ್ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಲಿಲ್ಲ. ಇತ್ತೀಚಿನ ದಿನಗಳಲ್ಲಿ ರಣಜಿಯಲ್ಲಿ ಉತ್ತಮ ಪ್ರದರ್ಶನ ತೋರಿದರೆ ಯಾರೂ ಗಮನಿಸುವುದಿಲ್ಲ ಆದರೆ ಐಪಿಎಲ್ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ ತಂಡದಲ್ಲಿ ಸ್ಥಾನ ಸಿಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....