ಆಪರೇಷನ್ ಗೆ ಒಳಗಾಗಿದ್ದ ಕೆಎಲ್ ರಾಹುಲ್ ಚೇತರಿಕೆ

Date:

ಈ ಬಾರಿಯ ಐಪಿಎಲ್ ಟೂರ್ನಿಯ ವೇಳೆ ಅಪೆಂಡಿಸಿಟೀಸ್‌ಗೆ ಒಳಗಾಗಿದ್ದ ಕೆಎಲ್ ರಾಹುಲ್‌ಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸದ್ಯ ಕೆಎಲ್ ರಾಹುಲ್ ಅಪೆಂಡಿಸಿಟೀಸ್‌ನಿಂದ ಚೇತರಿಸಿಕೊಳ್ಳುತ್ತಿದ್ದು ಇಂಗ್ಲೆಂಡ್‌ಗೆ ಪ್ರವಾಸ ಹೋಗಲಿರುವ ಟೀಮ್ ಇಂಡಿಯಾ ಜೊತೆ ರಾಹುಲ್ ಕೂಡ ಇಂಗ್ಲೆಂಡ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ.

ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಗೆ ಆಯ್ಕೆಯಾಗಿರುವ ಕೆ ಎಲ್ ರಾಹುಲ್ ಅಪೆಂಡಿಸಿಟೀಸ್‌ನಿಂದ ಚೇತರಿಕೆ ಕಂಡ ಬೆನ್ನಲ್ಲೇ ಸಣ್ಣ ತರಬೇತಿಯನ್ನು ಆರಂಭಿಸಿದ್ದಾರೆ.

ತಾವು ತರಬೇತಿ ಪಡೆದುಕೊಳ್ಳುತ್ತಿರುವ ಚಿತ್ರಗಳನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿರುವ ಕೆಎಲ್ ರಾಹುಲ್ ಚೇತರಿಸಿಕೊಂಡಿರುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದು ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧ ಎಂಬುದನ್ನು ತಿಳಿಸಿದ್ದಾರೆ.

ಇನ್ನು ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಜೂನ್ 18ರಿಂದ ಆರಂಭವಾಗಲಿದ್ದು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಆರಂಭವಾಗಲಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...