ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಎಚ್. ಎಸ್. ದೊರೆಸ್ವಾಮಿ ವಿಧಿವಶರಾದರು. ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

104 ವರ್ಷದ ಎಚ್. ಎಸ್. ದೊರೆಸ್ವಾಮಿ ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ವಿಧಿವಶರಾದರು. ರಾತ್ರಿಯಿಂದ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಹೃಧಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಕೋವಿಡ್ ಸೋಂಕಿನಿಂದ ಗುಣಮುಖಗೊಂಡ ದೊರೆಸ್ವಾಮಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 12 ದಿನಗಳಿಂದ ಆಸ್ಪತ್ರೆಯಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.






