ಆತನಿಂದ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ: ಅಕ್ಷರ್!

Date:

2014ರಲ್ಲಿ ಢಾಕಾದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಕ್ಷರ್ ಪಟೇಲ್ ಪದಾರ್ಪಣೆ ಮಾಡಿದರು. ಅಕ್ಷರ್ ಪಟೇಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 7 ವರ್ಷಗಳು ಕಳೆದಿದ್ದರೂ ಸಹ ಟೀಮ್ ಇಂಡಿಯಾ ಪರ ಆಡುವ ಅವಕಾಶ ಸಿಕ್ಕಿರುವುದು ಕಡಿಮೆ ಪಂದ್ಯಗಳಲ್ಲಿ. ಇದುವರೆಗೂ ಅಕ್ಷರ್ ಪಟೇಲ್ 38 ಏಕದಿನ ಪಂದ್ಯಗಳು ಮತ್ತು 12 ಟಿ ಟ್ವೆಂಟಿ ಪಂದ್ಯಗಳಲ್ಲಿ ಮಾತ್ರ ಟೀಮ್ ಭಾರತದ ಪರ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.


ಇನ್ನು ಟೆಸ್ಟ್ ಕ್ರಿಕೆಟ್‍ಗೆ ಅಕ್ಷರ್ ಪಟೇಲ್ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದದ್ದು ಪ್ರಸ್ತುತ ವರ್ಷದಲ್ಲಿಯೇ. ಹೌದು ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯ ವೇಳೆ ಭಾರತ ತಂಡದ ಪ್ರಮುಖ ಆಲ್‌ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿಯುವಂತಹ ಪರಿಸ್ಥಿತಿ ಬಂದಿತ್ತು. ಹೀಗಾಗಿ ಜಡೇಜಾ ಸ್ಥಾನಕ್ಕೆ ಅಕ್ಷರ್ ಪಟೇಲ್‌ರನ್ನು ಕರೆತರಲಾಯಿತು.


‘ನನ್ನ ಗಾಯದ ಸಮಸ್ಯೆಯಿಂದ ನಾನು ಭಾರತ ಏಕದಿನ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡೆ. ಆದರೆ ಟೆಸ್ಟ್ ಕ್ರಿಕೆಟ್ ವಿಷಯಕ್ಕೆ ಬಂದರೆ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ತಂಡದಲ್ಲಿದ್ದರು, ಈ ಇಬ್ಬರೂ ಸಹ ಉತ್ತಮ ಪ್ರದರ್ಶನ ನೀಡುತ್ತಿದ್ದ ಹಿನ್ನೆಲೆಯಲ್ಲಿ ತಂಡದಲ್ಲಿ ಅವಕಾಶ ಪಡೆದುಕೊಳ್ಳುವುದು ಸುಲಭವಾಗಿರಲಿಲ್ಲ. ಅದರಲ್ಲಿಯೂ ಜಡೇಜಾ ನೀಡುತ್ತಿದ್ದ ಪ್ರದರ್ಶನ ಅತ್ಯದ್ಭುತ, ಆತ ತಂಡದಲ್ಲಿರುವಾಗ ಬೇರೆ ಯಾವುದೇ ಎಡಗೈ ಸ್ಪಿನ್ನರ್‌ಗೆ ತಂಡದಲ್ಲಿ ಅವಕಾಶ ಸಿಗುವುದಿಲ್ಲ, ಅಷ್ಟರಮಟ್ಟಿಗೆ ಜಡೇಜಾ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ ಪ್ರದರ್ಶನವನ್ನು ನೀಡುತ್ತಿದ್ದರು. ಈ ನಡುವೆ ನನಗೆ ಅವಕಾಶ ಸಿಕ್ಕಾಗ ಉತ್ತಮ ಪ್ರದರ್ಶನವನ್ನು ನೀಡಲು ಪ್ರಯತ್ನಿಸುತ್ತಿದ್ದೆ’ ಎಂದು ಅಕ್ಷರ್ ಪಟೇಲ್ ರವೀಂದ್ರ ಜಡೇಜಾ ಪ್ರದರ್ಶನವನ್ನು ಕೊಂಡಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...