ನಿಂಗೆ ತಾಕತ್ತಿದ್ರೆ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿಸು: ಜಿಟಿಡಿ

Date:

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿ ಬಗ್ಗೆ ಸಂಸದ ಅಸಮಾಧಾನ‌ ವ್ಯಕ್ತಪಡಿಸಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಗಳ ಬೆನ್ನಿಗೆ ನಿಂತಿರುವ ಶಾಸಕ ಜಿ.ಟಿ. ದೇವೇಗೌಡ, ನಿನಗೆ ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿಸು ಎಂದು ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಖಾಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡಿ, ದಿನ ಬೆಳಗಾದರೆ ಪೇಪರ್ ಸ್ಟೇಟ್‌ಮೆಂಟ್ ಮಾಡಿದರೆ ಹುಲಿ ಆಗಲ್ಲ. ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ. ಜಿಲ್ಲೆಯ ಶಾಸಕರು ನಿನಗಿಂತ ಹೆಚ್ಚು ಕೆಲಸ‌ ಮಾಡ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಹೇಳು? ಎಂದು ಪ್ರಶ್ನಿಸಿದ್ದಾರೆ.

ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ. ನೀನು ಪವರ್‌ಫುರ್ ಎಂಪಿ, ಪಿಎಂ, ಸಿಎಂ ನೀನು ಹೇಳಿದಂತೆ ಕೇಳ್ತಾರೆ? ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿ ತೋರಿಸು. ಅದನ್ನು ಬಿಟ್ಟು ಪೇಪರ್‌ ಸ್ಟೇಟ್‌ಮೆಂಟ್ ಕೊಟ್ಟು ಗೊಂದಲ ಯಾಕೆ ಮೂಡಿಸ್ತೀಯಾ? ಎಂದು ಪ್ರಶ್ನಿಸಿರುವ ಅವರು, ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯುಕ್ತಿಕ ಸಮಸ್ಯೆ ಇದೆ. ನಿಮ್ಮ ಹೇಳಿಕೆಗಳು ಜನಸಾಮಾನ್ಯರಲ್ಲಿ ಅನುಮಾನ ಸೃಷ್ಟಿಸಿವೆ ಎಂದರು.

ಸಾ.ರಾ.ಮಹೇಶ್‌ ಮಾತ್ರ ಮೈಸೂರು ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದಾರೆ ಎಂಬ ಪ್ರತಾಪ್‌ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಜಿಟಿಡಿ, ಒಬ್ಬ ಮಾತ್ರ ಹೀರೋ, ನಾವೆಲ್ಲಾ ಜೀರೋನಾ? ನಾವೆಲ್ಲ ನಮ್ಮ ಸ್ವಂತ ಹಣ ಖರ್ಚು ಮಾಡ್ತಿದ್ದೀವಿ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಹೇಳು ಎಂದು ಪ್ರಶ್ನಿಸಿದರು.

ಇದೇ ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಜನ ಸಾಯ್ತಿದ್ದಾರೆ. ಈಗ ಸರ್ಕಾರ ತೆಗೆಯಲು ಹೋಗಬೇಕಿತ್ತ? ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲು ಹೊರಟಿರುವುದು ಸರಿಯಲ್ಲ. ಜನರ ಕಷ್ಟ ನೋಡುವ ಬದಲು ದೆಹಲಿಗೆ ಹೋಗುವ ಅಗತ್ಯ ಇತ್ತ ?ಯಡಿಯೂರಪ್ಪ ಚನ್ನಾಗಿ ಕೆಲಸ ಮಾಡುತ್ತಿದ್ದಾರೆ, ಅವರನ್ನು ಕೆಲಸ ಮಾಡಲು ಬಿಡಿ. ಇದರ ಬದಲಿಗೆ ಸರ್ಕಾರ ಬೀಳಸಲು ಪ್ರಯತ್ನ ಮಾಡಿರೋದು ಸರಿಯಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...