ಮುಂದಿನ ಐದು ದಿನಗಳ ಕಾಲ ಕೇರಳ ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 2 ರಿಂದ 4ರವರೆಗೆ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅಧಿಕ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ಒಂದೆರೆಡು ವಾರಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಇಂದು ಕೇರಳಕ್ಕೆ ಪ್ರವೇಶಿಸಬೇಕಿದ್ದು ಮುಂಗಾರು ಮೂರು ದಿನ ತಡವಾಗಿ ಆಗಮಿಸಲಿದೆ.
ಜೂನ್ 3ರಿಂದ ಕೇರಳದಲ್ಲಿ ಮುಂಗಾರಿನ ಪ್ರವೇಶವಾಗಲಿದೆ. ಇದರ ಪರಿಣಾಮವಾಗಿ ನಾಳೆಯಿಂದ (ಜೂನ್ 1) ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇಂದಿನಿಂದ 5 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.