ಕೊಹ್ಲಿ ಇಮ್ರಾನ್ ಖಾನ್ ಸ್ಟೈಲ್ ಕಾಪಿ ಮಾಡುತ್ತಿದ್ದಾನೆ ಎಂದ ಪಾಕ್ ಆಟಗಾರ!

Date:

 

ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್‌ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್‌ನಲ್ಲಿಯೇ ಉಳಿದುಕೊಳ್ಳಲಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.


ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ದೊಡ್ಡ ಪ್ರಮಾಣದಲ್ಲಿ ಚರ್ಚೆಗಳಾಗುತ್ತಿದ್ದು ಈಗಾಗಲೇ ಹಲವಾರು ಮಾಜಿ ಕ್ರಿಕೆಟಿಗರು ಹಾಗೂ ಕ್ರಿಕೆಟ್ ಪಂಡಿತರು ಯಾವ ತಂಡ ಗೆಲ್ಲಲಿದೆ ಎಂಬುದನ್ನು ಊಹಿಸಿದ್ದಾರೆ. ಇದೀಗ ಪಾಕಿಸ್ತಾನದ ಮಾಜಿ ಆಟಗಾರ ರಮೀಜ್ ರಾಜಾ ಕೂಡ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ಮಾತನಾಡಿದ್ದು ವಿರಾಟ್ ಕೊಹ್ಲಿಯನ್ನು ಪಾಕಿಸ್ತಾನದ ಮಾಜಿ ನಾಯಕ ಇಮ್ರಾನ್ ಖಾನ್‌ಗೆ ಹೋಲಿಕೆ ಮಾಡಿದ್ದಾರೆ.


‘ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ತುಂಬಾ ಬಲಿಷ್ಠವಾಗಿದೆ. ವಿರಾಟ್ ಕೊಹ್ಲಿಯ ಆಕ್ರಮಣಕಾರಿ ನಾಯಕತ್ವ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಆಟದ ಯೋಜನೆ ಆಕ್ರಮಣಶೀಲತೆಯಿಂದ ಕೂಡಿದ್ದು ತಂಡದಲ್ಲಿ ನಕಾರಾತ್ಮಕ ಅಂಶಗಳಿಗೆ ಸ್ಥಾನವಿರುವುದಿಲ್ಲ. ಹೀಗಾಗಿ ಮುಕ್ತವಾಗಿ ಆಟವನ್ನು ಆಡುತ್ತಾ ಎದುರಾಳಿಗಳ ಮೇಲೆ ಪ್ರಾಬಲ್ಯವನ್ನು ಸಾಧಿಸಬಹುದು. ಇದೇ ಮಾದರಿಯನ್ನು ನಾವು ಇಮ್ರಾನ್ ಖಾನ್ ನಾಯಕತ್ವದಲ್ಲಿ ಅನುಸರಿಸುತ್ತಿದ್ದೆವು. ಇದೀಗ ವಿರಾಟ್ ಕೊಹ್ಲಿ ಕೂಡ ಇಮ್ರಾನ್ ಖಾನ್ ರೀತಿಯಲ್ಲಿಯೇ ತಂಡವನ್ನು ಮುನ್ನಡೆಸುತ್ತಿದ್ದಾರೆ’ ಎಂದು ರಮೀಜ್ ರಾಜಾ ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...