No menu items!
15 C
Munich
Sunday, April 19, 2026

ಸಲಾಂ ರಾಕಿಭಾಯ್..ಮಾನವೀಯತೆ ಮೆರೆದ ಯಶ್..

Must read

 

ರಾಕಿಂಗ್ ಸ್ಟಾರ್ ಯಶ್ ಸಿನಿಮಾದಲ್ಲಿ ಅದ್ಭುತ ನಟನೆ ಮೂಲಕ ಜನಮನಗೆದ್ದಿರುವುದು ಮಾತ್ರವಲ್ಲ.‌ ಸಮಾಜಮುಖಿ, ಮಾನವೀಯ ಕೆಲಸಗಳಿಂದಲೂ ಜನರಿಗೆ ಹತ್ತಿರವಾಗಿದ್ದಾರೆ, ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಇದೀಗ ಮತ್ತೆ ಯಶ್ ಮಾನವೀಯತೆ ಮೆರೆದಿದ್ದಾರೆ.
ಯಶ್ ಇದೀಗ ಕಷ್ಟದಲ್ಲಿರುವ ಸಿನಿಮಾ ಕಲಾವಿದರು , ತಂತ್ರಜ್ಞರಿಗೆ ಸಹಾಯ ಮಾಡುತ್ತಿದ್ದಾರೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಅವರು , ಸಾಧ್ಯವಾಗುವ ಎಲ್ಲರೂ ತಮ್ಮ ತಮ್ಮ ಕ್ಷೇತ್ರದಲ್ಲಿ ಕಷ್ಟದಲ್ಲಿರುವವರಿಗೆ ನೆರವಾಗಬೇಕು ಎಂದು ಮನವಿಯನ್ನು ಮಾಡಿದ್ದಾರೆ.

ಯಶ್ ಟ್ವೀಟ್ :
ಕೊರೊನಾ ಕಷ್ಟಕಾಲದಲ್ಲಿ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ನೆರವಿಗೆ ರಾಕಿಭಾಯ್ ಮುಂದಾಗಿದ್ದಾರೆ.
ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚು ಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಹೌದು, ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ .ಹಾಗಾಗಿ ಸುಮಾರು 3000 ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5000 ರೂಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ. ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲಾ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ. ಬದಲಿಗೆ‌ ಶಕ್ತಿ ಇರುವ ಹೃದಯವಂತರು ..ತಮ್ಮ ತಮ್ಮ ಕ್ಷೇತ್ರಗಳಲ್ಲಿನ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲು ‌ಕೊಟ್ಟು ಸಹಾಯಮಾಡಿದರೆ..ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎಂಬುದು ನನ್ನ ಆಶಯ.
ನಿಮ್ಮ ಪ್ರೀತಿಯ ಯಶ್ ..

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article