ಸರ್ಕಾರದಿಂದ ಕಾವೇರಿ ನದಿಗೆ ಕೊರೊನಾ ಮೃತರ ಅಸ್ಥಿ ವಿಸರ್ಜನೆ!

Date:

ಬೆಂಗಳೂರು, ಜೂನ್ 2: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಚಿತಾಭಸ್ಮವನ್ನು ತೆಗೆದುಕೊಂಡು ಹೋಗುವದಕ್ಕೂ ಜನರು ಭಯ ಪಡುವಂತಾ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆ ಬುಧವಾರ ಸ್ವತಃ ಕಂದಾಯ ಸಚಿವ ಆರ್ ಅಶೋಕ್ ಮೃತ ಅಸ್ಥಿ ವಿಸರ್ಜನೆ ಮಾಡಲಿದ್ದಾರೆ.

 

ಕೊವಿಡ್-19 ಸೋಂಕಿನಿಂದ ಮೃತಪಟ್ಟ 1,000 ಜನರ ಅಸ್ಥಿಯನ್ನು ಸರ್ಕಾರದ ವತಿಯಿಂದ ಅಸ್ಥಿ ವಿಸರ್ಜನೆ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳವಾಡಿಯ ಅನ್ನಪೂರ್ಣೇಶ್ವರಿ ಹಾಗೂ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಗುತ್ತದೆ.

ಸಾಮಾನ್ಯವಾಗಿ ಮೃತರ ಅಂತ್ಯಸಂಸ್ಕಾರದ ನಂತರದಲ್ಲಿ ಅಸ್ಥಿಯನ್ನು ಹರಿಯುವ ನದಿಯಲ್ಲಿ ವಿಸರ್ಜಿಸಿದರೆ ಮೃತ ಆತ್ಮಕ್ಕೆ ಮುಕ್ತಿ ಸಿಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಸರ್ಕಾರದ ವತಿಯಿಂದಲೇ ಕಂದಾಯ ಸಚಿವ ಆರ್ ಅಶೋಕ್ ಅಸ್ಥಿ ವಿಸರ್ಜಿಸಲಿದ್ದಾರೆ.

ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಚಿತಾಭಸ್ಮವನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಸಂಬಂಧಿಕರಿಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಸಾಮಾನ್ಯವಾಗಿ ಮೃತರ ಅಂತ್ಯಕ್ರಿಯೆ ನಡೆದ ದಿನ ಅಥವಾ ಮರುದಿನವೇ ಚಿತಾಭಸ್ಮವನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ ಕೆಲವು ಪ್ರಕರಣಗಳಲ್ಲಿ ಸಂಬಂಧಿಕರು ಅಸ್ಥಿಯನ್ನು ತೆಗೆದುಕೊಂಡು ಹೋಗುವುದಕ್ಕೂ ಹಿಂದೇಟು ಹಾಕಿದ್ದರು. ಹೀಗಾಗಿ 1200 ಮೃತರ ಚಿತಾಭಸ್ಮವನ್ನು ಹಾಗೇ ಶೇಖರಿಸಿ ಇಡಲಾಗಿತ್ತು. ಬುಧವಾರ ಮೃತರ ಆತ್ಮಕ್ಕೆ ಮುಕ್ತಿ ದೊರಕಿಸುವ ಉದ್ದೇಶದಿಂದ ಸರ್ಕಾರವೇ ಅಸ್ಥಿ ವಿಸರ್ಜನೆಗೆ ಮುಂದಾಗಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...