ಚಿರು ನೆನೆದ ಅರ್ಜುನ್ ಸರ್ಜಾ ಹೇಳಿದ್ದೇನು?

Date:

ಸರ್ಜಾ ಕುಟುಂಬದ ಕುಡಿ.. ಕನ್ನಡ ಚಿತ್ರರಂಗದ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಬಾರದ ಲೋಕಕ್ಕೆ ತೆರಳಿ ಇಂದಿಗೆ ಸರಿಯಾಗಿ ಒಂದು ವರ್ಷ. ಇವತ್ತು ಚಿರಂಜೀವಿ ಸರ್ಜಾ ಅವರ ಮೊದಲನೇ ವರ್ಷದ ಪುಣ್ಯಸ್ಮರಣೆ. ಈ ಸಂದರ್ಭದಲ್ಲಿ ನಟ ಅರ್ಜುನ್ ಸರ್ಜಾ ಭಾವುಕರಾಗಿದ್ದಾರೆ.
ಚಿರಂಜೀವಿ ಸರ್ಜಾ ಅವರನ್ನು ಮಗನಂತೆ ನೋಡಿಕೊಂಡಿದ್ದ ಅರ್ಜುನ್ ಸರ್ಜಾ ಇಂದು ಮಗನಿಲ್ಲದೆ ದುಃಖಿಸುತ್ತಿದ್ದಾರೆ. ಚಿರಂಜೀವಿ ಸರ್ಜಾರನ್ನ ಕಳೆದುಕೊಂಡ ನೋವು ಅವರನ್ನು ಕಾಡುತ್ತಲೇ ಇದೆ. ಚಿರು ನೆನಪಿನಲ್ಲಿ.. ಚಿರು ಜೊತೆಗಿನ ಅಪರೂಪದ ಫೋಟೋಗಳನ್ನು ಇಂದು ಅರ್ಜುನ್ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ”ನಿನ್ನನ್ನು ಮಿಸ್ ಮಾಡಿಕೊಳ್ತೇನೆ ಮಗನೇ” ಎಂದು ಬರೆದುಕೊಂಡಿದ್ದಾರೆ.
”ಒಂದು ವರ್ಷ ಕಳೆದಿದೆ.. ಆದರೆ ನಿನ್ನನ್ನು ಜೀವನಪರ್ಯಂತ ಮಿಸ್ ಮಾಡಿಕೊಳ್ಳುತ್ತೇನೆ ಚಿರು ಮಗನೇ.. ನೀನೆಲ್ಲೇ ಇದ್ದರೂ ನಿನ್ನ ಮುಖದ ಮೇಲಿನ ನಗು ಮಾತ್ರ ಹಾಗೇ ಇರಲಿ ಎಂದು ನಾನು ಆಶಿಸುತ್ತೇನೆ” ಎಂದು ನಟ ಅರ್ಜುನ್ ಸರ್ಜಾ ಟ್ವೀಟ್ ಮಾಡಿದ್ದಾರೆ.


ಪುಣ್ಯಸ್ಮರಣೆ ಪ್ರಯುಕ್ತ ಇಂದು ಕುಟುಂಬಸ್ಥರು ಚಿರು ಪುಣ್ಯಭೂಮಿಗೆ ಪೂಜೆ ಸಲ್ಲಿಸಿದ್ದಾರೆ. ಪುತ್ರ ಜೂನಿಯರ್ ಚಿರು ಕೂಡ ತಂದೆಯ ಪುಣ್ಯಭೂಮಿಗೆ ನಮನ ಸಲ್ಲಿಸಿದ್ದಾನೆ.
ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಚಿರುಗೆ ಭಾವುಕ ಪತ್ರವೊಂದನ್ನು ಸರ್ಜಾ ಕುಟುಂಬ ಬರೆದಿದೆ. ”ನೀನು ದೇವರ ಮನೆಗೆ ಹೋಗಿ ಒಂದು ವರುಷವಾಯಿತು. ಎಷ್ಟು ಬೇಗ ಒಂದು ವರ್ಷ, ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ.

ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ ಉದಾರಗುಣ ಮತ್ತು ಅಜಾತ ಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದ ಇರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದಿಗೂ ನಿನ್ನ ನೆನಪಿನಲ್ಲೇ, ನಿನ್ನ ಪ್ರೀತಿಯ ಕುಟುಂಬ..” ಎಂದು ಪತ್ರದಲ್ಲಿ ಬರೆಯಲಾಗಿದೆ.

 

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...