ಲಾಕ್‌ಡೌನ್ ನಡುವೆಯೂ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ?

Date:

ರಾಜ್ಯದಲ್ಲಿ ಜೂನ್ 14ರವರೆಗೂ ಲಾಕ್‌ಡೌನ್ ವಿಸ್ತರಿಸಲಾಗಿದ್ದು, ಲಾಕ್‌ಡೌನ್ ಸಡಿಲಿಕೆ ಬಳಿಕ ಸಾರಿಗೆ ಆರಂಭಿಸುವ ಹಾಗೂ ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಕುರಿತು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿದ್ದಾರೆ.

ಜೂನ್ 14ರ ನಂತರ ಲಾಕ್‌ಡೌನ್ ಸಡಿಲ ಮಾಡಿದರೆ ಹಂತ ಹಂತವಾಗಿ ಸಾರಿಗೆ ಪ್ರಾರಂಭ ಮಾಡುತ್ತೇವೆ. ಪ್ರಯಾಣಿಕರ ಅಂತರ ಕಾಯ್ದುಕೊಂಡು, ಅವರಿಗೆ ಸ್ಯಾನಿಟೈಸರ್, ಮಾಸ್ಕ್ ಎಲ್ಲವನ್ನು ಕೊಡುತ್ತೇವೆ ಎಂದು ಹೇಳಿದ್ದಾರೆ. ಕೊರೊನಾ ಸೋಂಕಿಗೆ ಎರಡೂ ಡೋಸ್ ಲಸಿಕೆ ಆಗುವವರೆಗೂ ನಮ್ಮ ನೌಕರರಿಗೆ ಕೆಲಸಕ್ಕೆ ಬರಲು ಒತ್ತಡ ಹಾಕುವುದಿಲ್ಲ. ಎರಡನೇ ಡೋಸ್ ತೆಗೆದುಕೊಂಡವರಿಗೆ ರಕ್ಷಣೆ ಕೊಟ್ಟು ಸೇವೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸಲಾಗುತ್ತಿದೆ ಎಂಬ ವರದಿ ಬರುತ್ತಿವೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ರಾಜ್ಯದಲ್ಲಿ ನಾಲ್ಕು ನಿಗಮಗಳಿವೆ. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಗೆ ಮಾಡುವುದಿಲ್ಲ. ಕೊರೊನಾ ಲಾಕ್‌ಡೌನ್‌ನಿಂದಾಗಿ ಜನರು ಮೊದಲೇ ಕಷ್ಟದಲ್ಲಿದ್ದಾರೆ. ಮತ್ತೆ ಅವರಿಗೆ ಕಷ್ಟ ಕೊಡಲು ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಯೋಚಿಸಲಾಗುವುದು” ಎಂದು ಹೇಳಿದ್ದಾರೆ.

ಬಿಎಂಟಿಸಿ ದರ ಹೆಚ್ಚಿಸಲು ಅಧಿಕಾರಿಗಳು ಪ್ರಸ್ತಾವನೆ ಕೊಟ್ಟಿರುವುದು ನಿಜ. ಆದರೆ ಈ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...