ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಈಗ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

Date:

ನಟ ಸಂಚಾರಿ ವಿಜಯ್ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಅಪೋಲೋ ಆಸ್ಪತ್ರೆ ವೈದ್ಯರು ಇಂದು (ಜೂನ್ 14) ಸುದ್ದಿಗೋಷ್ಠಿ ಮಾಡುವ ಸಾಧ್ಯತೆ ಇದೆ

 

ಬೈಕ್ ಅಪಘಾತದಿಂದ ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ತೀವ್ರ ಪೆಟ್ಟು ಆಗಿದ್ದು, ಮೆದುಳಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆದರೆ, ವಿಜಯ್ ಅವರಿಗೆ ಪ್ರಜ್ಞೆ ಬಂದಿಲ್ಲ. ಸದ್ಯ, ವಿಜಯ್ ಯಥಾಸ್ಥಿತಿ ಮುಂದುವರಿದಿದ್ದು, ಮತ್ತಷ್ಟು ಸಮಯ ಕಾದು ನೋಡಬೇಕಾಗಿದೆ.

ಸಂಚಾರಿ ವಿಜಯ್ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ 11 ಗಂಟೆಗೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡುವ ನಿರೀಕ್ಷೆ ಇದೆ. ಭಾನುವಾರ ರಾತ್ರಿ 10.30ಕ್ಕೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿತ್ತು.

ವಿಜಯ್ ಸದ್ಯಕ್ಕೆ ವೆಂಟಿಲೇಟರ್ ಸಹಾಯದಲ್ಲಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಉಸಿರಾಟ ಮತ್ತು ಹೃದಯಬಡಿತದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಪ್ರಜ್ಞೆ ಬಂದ ಕೂಡಲೇ ವಿಜಯ್ ಆರೋಗ್ಯದ ಬಗ್ಗೆ ಸ್ಪಷ್ಟವಾಗಿ ಹೇಳಬಹುದು ಎಂದು ವೈದ್ಯರು ಹೇಳುತ್ತಿದ್ದಾರೆ. ನ್ಯೂರೋ ಸರ್ಜನ್ ಡಾ.ಅರುಣ್ ನಾಯಕ್ ಸಂಚಾರಿ ವಿಜಯ್‌ಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ತೀವ್ರ ನಿಗಾ ವಹಿಸಿದ್ದಾರೆ. ಭಾನುವಾರ ಸತೀಶ್ ನೀನಾಸಂ ಮಾತನಾಡಿ, ಸಂಚಾರಿ ವಿಜಯ್ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. ಪ್ರಜ್ಞೆ ಬರಬೇಕಾಗಿದೆ. ಉಳಿದಂತೆ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...