ಜೂನ್ 21ರಿಂದ ಲಾಕ್‌ಡೌನ್ ಸಡಿಲಿಕೆ; ಏನಿರುತ್ತೆ? ಏನಿರಲ್ಲ?

Date:

ಬೆಂಗಳೂರು, ಜೂನ್ 15: ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಶುರುವಾಗಲಿದೆ. ಈಗಾಗಲೇ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸಲಾಗಿದ್ದು, ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಇದೀಗ ಜೂನ್ 21ರಂದು ಎರಡನೇ ಹಂತದ ಲಾಕ್‌ಡೌನ್ ಸಡಿಲ ಪ್ರಕ್ರಿಯೆ ಶುರುವಾಗಲಿದ್ದು, ಯಾವುದಕ್ಕೆಲ್ಲಾ ಅನುಮತಿ ಇದೆ, ಯಾವುದಕ್ಕೆ ಇರುವುದಿಲ್ಲ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಅನ್‌ಲಾಕ್ ಮಾಡುವುದರ ಜತೆಗೆ ಕೊರೊನಾ ಸೋಂಕಿನಿಂದ ಜನರಿಗೆ ರಕ್ಷಣೆ ನೀಡುವುದು ಕೂಡ ಸರ್ಕಾರದ ಆದ್ಯತೆಯಾಗಿದ್ದು, ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗುತ್ತಿದೆ.

ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಇದೀಗ ಒಪ್ಪಿಗೆ ನೀಡಿದೆ. ಜೂನ್ 21 ರಿಂದ ಮಾಲ್, ಹೇರ್​ ಕಟ್​ ಶಾಪ್, ಹೋಟೆಲ್, ಚಿಕ್ಕ‌ಚಿಕ್ಕ ಮಾರುಕಟ್ಟೆ, ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ನೀಡಿ ಮುಕ್ತಗೊಳಿಸಲಾಗುವುದು. ಕರ್ನಾಟಕದಲ್ಲಿ ಎರಡನೇ ಹಂತದ ಅನ್​ಲಾಕ್​ಗೆ ಇದೀಗ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಬರುತ್ತದೆ.

ರಾಜ್ಯದಲ್ಲಿ ಅನ್‌ಲಾಕ್ 2.O ಜಾರಿಯಾಗುವ ಹಿನ್ನೆಲೆಯಲ್ಲಿ ಜೂ.21ರಿಂದ ಕರ್ನಾಟಕದಲ್ಲಿ ಬಸ್ ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರವಾಗುವ ಸಾಧ್ಯತೆ ಇದೆ. ಚಿನ್ನದಂಗಡಿ, ಬಟ್ಟೆ ಅಂಗಡಿ, ಸೇರಿದಂತೆ ಎಲ್ಲಾ ಬಗೆಯ ವಾಣಿಜ್ಯ ಮಳಿಗೆಗಳುಕೂಡ ಜೂನ್ 21 ರಿಂದ ಓಪನ್ ಆಗಲಿವೆ. ದಿನಕ್ಕೆ ಎಂಟು ಗಂಟೆಗಳ ಕಾಲ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡಲಾಗುವುದು. ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಶೇ.50 ರಷ್ಟು ಗ್ರಾಹಕರಿಗೆ ಪ್ರವೇಶ ಅವಕಾಶ ನೀಡಲಾಗಿದೆ.

ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ಸಹ ಓಪನ್ ಮಾಡಲು ತಾಂತ್ರಿಕ ಸಲಹಾ ಸಮಿತಿಯಿಂದ‌ ಗ್ರಿನ್ ಸಿಗ್ನಲ್ ದೊರೆತಿದೆ. ಹಾಗೆಯೇ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಅಭಿಪ್ರಾಯದಂತೆ ಥಿಯೇಟರ್, ಜಿಮ್, ಸ್ವಿಮ್ಮಿಂಗ್ ಪೂಲ್, ಪಬ್, ಬಾರ್, ಕ್ರೀಡಾಂಗಣಗಳು ಬಂದ್ ಆಗಿರಲಿವೆ, ಇವುಗಳೆಲ್ಲವೂ ಮೂರನೇ ಹಂತದ ಅನ್‌ಲಾಕ್ ಸಂದರ್ಭದಲ್ಲಿ ತೆರೆಯುವ ನಿರೀಕ್ಷೆ ಇದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...