ಬೆಂಗಳೂರು, ಮೇ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ತತ್ತರಿಸಿದ ಕರ್ನಾಟಕದಲ್ಲಿ ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಭಾರತದ ಅಂಕಿ-ಅಂಶಗಳ ಜೊತೆಗೆ ರಾಜ್ಯದ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಭಾರಿ ಇಳಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5041 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 115 ಮಂದಿ ಮೃತಪಟ್ಟಿದ್ದು, ಇದೇ ಅವಧಿಯಲ್ಲಿ 14,785 ಸೋಂಕಿತರು ಗುಣಮುಖರಾಗಿದ್ದಾರೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ 33,148 ಜನರು ಪ್ರಾಣ ಬಿಟ್ಟಿದ್ದು, ಈವರೆಗೂ 25,81,559 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 1,62,282 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.