ನವದೆಹಲಿ, ಜೂನ್ 16: ಡ್ರೈವಿಂಗ್ ಲೈಸೆನ್ಸ್ ನಿರೀಕ್ಷೆಯಲ್ಲಿರುವ ಜನರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಚಾಲನಾ ಪರವಾನಗಿ ಪಡೆಯಲು ಹೊಸ ಅಧಿಸೂಚನೆ ಹೊರಡಿಸಿದ್ದು, ಈ ನಿಯಮದ ಪ್ರಕಾರ ನೀವು ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇದೀಗ ಆರ್‌ಟಿಒಗೆ ಹೋಗಿ ಚಾಲನಾ ಪರೀಕ್ಷೆಗೆ ಒಳಪಡಬೇಕಾಗಿಲ್ಲ.
ಆದರೆ ಯಾವುದೇ ಸರ್ಕಾರಿ ಮಾನ್ಯತೆ ಪಡೆದ ಚಾಲನಾ ತರಬೇತಿ ಕೇಂದ್ರದಿಂದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ. ಅಂಥವರಿಗೆ ಚಾಲನಾ ಪರವಾನಗಿ ಅರ್ಜಿ ಸಲ್ಲಿಸುವಾಗ ಆರ್‌ಟಿಒದಲ್ಲಿ ನಡೆಯಲಿರುವ ಚಾಲನಾ ಪರೀಕ್ಷೆಯಿಂದ ವಿನಾಯಿತಿ ಸಿಗಲಿದೆ. ಈ ನಿಯಮ ಯಾವಾಗ ಜಾರಿಗೆ ಬರಲಿದೆ? ಮುಂದೆ ಓದಿ…
ಜುಲೈ 1ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಚಾಲನಾ ಪರವಾನಗಿ ಪಡೆಯಲು ಅರ್ಜಿ ಸಲ್ಲಿಸುವ ವ್ಯಕ್ತಿಗೆ ಇನ್ನು ಆರ್‌ಟಿಒದಲ್ಲಿ ಚಾಲನಾ ಪರೀಕ್ಷೆಯ ಅಗತ್ಯವಿರುವುದಿಲ್ಲ. ಅವರ ಚಾಲನಾ ಪರವಾನಗಿಯನ್ನು ಅವರು ಚಾಲನೆ ತರಬೇತಿ ಪಡೆದುಕೊಂಡ, ರಾಜ್ಯ ಸಾರಿಗೆ ಪ್ರಾಧಿಕಾರ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಚಾಲನಾ ತರಬೇತಿ ಕೇಂದ್ರದ ಪ್ರಮಾಣ ಪತ್ರವನ್ನು ಪರಿಗಣಿಸಿ ನೀಡಲಾಗುವುದು.