ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಸೂಚನೆ

Date:

ಬೆಂಗಳೂರು: ರೆಗ್ಯೂಲರ್ ಸ್ಟೂಡೆಂಟ್ಸ್ ಗಳನ್ನು ಸಾರ್ವತ್ರಿಕವಾಗಿ ಪಾಸ್ ಮಾಡುತ್ತೇವೆ ಎಂದು ಸರ್ಕಾರ ಆದೇಶ ನೀಡಿದ ಬೆನ್ನಲ್ಲೆ ರಿಪಿಟರ್ಸ್ ವಿದ್ಯಾರ್ಥಿಗಳು ಕೂಡ ನಮ್ಮನ್ನೂ ಪಾಸ್ ಮಾಡಿ ಎಂದು ಹೈ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಡದಂತೆ ಹೈಕೋರ್ಟ್ ತಡೆ ಹಿಡಿದಿದೆ.

ಹೌದು, ಕಳೆದ ವಾರ ರಿಪಿಟರ್ಸ್ ವಿಧ್ಯಾರ್ಥಿಗಳು ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚನೆ ನೀಡಿತ್ತು. ಇಂದು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರ ತಮ್ಮ ನಿಲುವನ್ನು ತಿಳಿಸಿ ಈಗಾಗಲೇ 12 ತಜ್ಞರ ಸಮಿತಿ ರಚಿಸಿರುವುದಾಗಿ ಹೈಕೋರ್ಟಿಗೆ ಮಾಹಿತಿ ನೀಡಿದೆ.

76 ಸಾವಿರ ರಿಪೀಟರ್ಸ್‍ಗಳ ಫಲಿತಾಂಶದ ಬಗ್ಗೆ ತೀರ್ಮಾನ ಮಾಡಲಿದೆ. ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಪರೀಕ್ಷಾ ವಿಭಾಗದ ಜಂಟಿ ನಿರ್ದೇಶಕ ಕೃಷ್ಣಪ್ಪ ಹೈಕೋರ್ಟಿಗೆ ಮಾಹಿತಿ ರವಾನೆ ಮಾಡಿದರು.

ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ, ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ನ್ಯಾ.ಬಿ.ವಿ. ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ತಿಳಿಸಿತ್ತು. ಅಲ್ಲದೇ ವಿಚಾರಣೆ ಜುಲೈ 5 ಕ್ಕೆ ಮುಂದೂಡಿ ಸರ್ಕಾರದ ನಿಲುವು ತಿಳಿಸಲು ಸೂಚನೆ ನೀಡಿದೆ.

 

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...