“ದೇಶದಲ್ಲಿ ಕೊರೊನಾ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನು ಮುಂದಿನ ಆರರಿಂದ ಎಂಟು ವಾರಗಳಲ್ಲೇ ಮೂರನೇ ಅಲೆ ಪ್ರಭಾವ ಕಾಣಿಸಿಕೊಳ್ಳಲಿದೆ,” ಎಂದು ಏಮ್ಸ್ ಮುಖ್ಯಸ್ಥ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.
ಕೊರೊನಾ ಎರಡನೇ ಅಲೆ ತಗ್ಗುತ್ತಿದ್ದು, ಈಗಷ್ಟೇ ಹಲವು ರಾಜ್ಯಗಳಲ್ಲಿ ಕೊರೊನಾ ನಿರ್ಬಂಧಗಳನ್ನು ಸಡಿಲಿಸಿ ಅನ್‌ಲಾಕ್ ಮಾಡಲಾಗುತ್ತಿದೆ. ಹೀಗೆ ಸಡಿಲಿಕೆ ಮಾಡುತ್ತಿದ್ದಂತೆ ಮೂರನೇ ಅಲೆ ಕುರಿತು ಎಚ್ಚೆತ್ತುಕೊಳ್ಳಬೇಕಾಗಿದೆಯೆಂದು ಕೇಂದ್ರವೂ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಈ ಹಿಂದೆ ಮಾಡಿದ ತಪ್ಪನ್ನು ಪುನರಾವರ್ತನೆ ಮಾಡಬಾರದು. ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಿದೆ.