ಕೆಲಸ ಖಾಲಿ ಇವೆ; ಆಸಕ್ತರು ಅರ್ಜಿ ಸಲ್ಲಿಸಿ

Date:

ಕೆಐಒಸಿಎಲ್ ಬೆಂಗಳೂರು ಹಾಗೂ ಮಂಗಳೂರು ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 9/7/2021 ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಒಟ್ಟು 18 ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳನ್ನು ಮೂರು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಿದ್ದು, ಕಾರ್ಯಕ್ಷಮತೆ, ಸಂಸ್ಥೆಯ ಅಗತ್ಯಕ್ಕೆ ಅನುಗುಣವಾಗಿ 2 ವರ್ಷ ಅವಧಿ ವಿಸ್ತರಣೆ ಮಾಡಲು ಅವಕಾಶವಿದೆ.
ಆಫೀಸರ್ ಟ್ರೈನಿ (ಫೈನಾನ್ಸ್ & ಅಕೌಂಟ್ಸ್) 3, ಆಫೀಸರ್ ಟ್ರೈನಿ (ಕಮರ್ಷಿಯಲ್ ಇಲಾಖೆ) 3, ಆಫೀಸರ್ ಟ್ರೈನಿ (ಪರ್ಚೇಸ್ ಇಲಾಖೆ) 4 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಂಬಿಎ/ ಎಂಕಾಂ ಅನ್ನು ಪ್ರಥಮ ದರ್ಜೆಯಲ್ಲಿ ಪೂರ್ಣಗೊಳಿಸಿರಬೇಕು. ಕನಿಷ್ಠ1 ವರ್ಷದ ವೃತ್ತಿ ಅನುಭವ ಅವಶ್ಯ. ದೂರ ಶಿಕ್ಷಣದ ಮೂಲಕ ಪಡೆದ ಪದವಿಗಳಿಗೆ ಮಾನ್ಯತೆ ಇಲ್ಲ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 31/5/2021ಕ್ಕೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿ 30 ವರ್ಷಗಳು. ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ವಯೋಮಿತಿ ಸಡಿಲಿಕೆ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 20,000 ರೂ. ನಿಂದ 25,000 ರೂ. ತನಕ ವೇತನ ನಿಗದಿ ಮಾಡಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ಬಳಿಕ ಅರ್ಜಿ ಸಂಖ್ಯೆಯನ್ನು ಕಾಯ್ದಿರಿಸಬೇಕು. 14/7/202ರೊಳಗೆ ಆಫ್‌ಲೈನ್ ಪ್ರತಿಯನ್ನು ಪಡೆದು ಅಗತ್ಯ ದಾಖಲೆಗಳ ಜೊತೆಗೆ ಅಂಚೆ ಮೂಲಕ ಕಳಿಸಬೇಕು.
ವಿಳಾಸ; Joint General Manager (HR-A), HR Department, KIOCL Limited, Koramangala 2nd block, Sarjapura road, Bengaluru 560034.
ಹೆಚ್ಚಿನ ಮಾಹಿತಿಗಾಗಿ ವಿಳಾಸ
https://www.kioclltd.in/

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...