ಸಿದ್ದರಾಮಯ್ಯ & ಡಿಕೆ ಸುರೇಶ್ ನಡುವೆ ಫೈಟ್ ಶುರು!

Date:

“ನಿಜವಾದ ಕಾಂಗ್ರೆಸ್ಸಿಗರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅವರು ಪಕ್ಷದ ಶಿಸ್ತು ಕಲಿತಿರುತ್ತಾರೆ. ಆದರೆ ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಹೀಗೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸುತ್ತಾರೆ” ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಯಾರು? ಎಂಬ ವಿಚಾರವಾಗಿ ಪಕ್ಷದಲ್ಲಿ ಎದ್ದಿರುವ ಚರ್ಚೆ ಕುರಿತು ಖಡಕ್ ಮಾತುಗಳನ್ನು ಅವರು ಆಡಿದ್ದಾರೆ.

ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು, ಅಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಸೇರಿದ್ದರು. ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ. ಆದರೆ “ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತಿರುವವರಿಗೆ ಒಳ್ಳೆಯದಾಗಲಿ. ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲ. ಸಿಎಂ ಸ್ಥಾನ ಕಾಲಿಯೂ ಇಲ್ಲ. ಕಾಂಗ್ರೆಸ್ ಪಕ್ಷದ ಈಗಿನ ಶಾಸಕರು ಮುಂದಿನ ಶಾಸಕಾಂಗ ಪಕ್ಷದ ಸದಸ್ಯರಲ್ಲ. 2023 ಕ್ಕೆ ಚುನಾವಣೆ ಇದೆ. ಚುನಾವಣೆ ಗೆಲ್ಲುವ ಬಗ್ಗೆ ಶಾಸಕರು ಕೆಲಸ ಮಾಡಬೇಕಿದೆ. ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ನಾವು ಭಾವಿಸಿದ್ದೇವೆ. ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೆಂಬಲಿಗ ಶಾಸಕರಿಗೆ ತಿರುಗೇಟು ನೀಡಿದ್ದಾರೆ.


“ಅದು ಶಾಸಕರ ಅಭಿಪ್ರಾಯವೇ ಹೊರತು ನನ್ನ ಅಭಿಪ್ರಾಯವಲ್ಲ” ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆಯೂ ಸಂಸದ ಡಿ.ಕೆ. ಸುರೇಶ್ ಅವರು ಉತ್ತರಿಸಿದ್ದಾರೆ. “ಅವರು ಅವರ ವೈಯಕ್ತಿಕ ಅಭಿಪ್ರಾಯ ಹೇಳಬಹುದು, ನಾನು ನನ್ನ ವೈಯಕ್ತಿಕ ಅಭಿಪ್ರಾಯ ಹೇಳಬಹುದು. ಆದರೆ ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕಲ್ಲ? ಅದು ಮುಖ್ಯ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಶಾಸಕರು ಹೇಳುತ್ತಿದ್ದಾರೆ. ಅದಕ್ಕೆ ಉತ್ತರಿಸಿರುವ ಡಿಕೆ ಸುರೇಶ್ ಅವರು, “ಚುನಾವಣೆ ನೇತೃತ್ವದ ಬಗ್ಗೆ ಚರ್ಚೆ ಮಾಡಲು ಸಮಯ ಬಹಳ ದೂರವಿದೆ. ಈಗ ಕರೋನಾ ಇದ್ದು, ಅದನ್ನು ನಿಭಾಯಿಸಲು ಏನು ಮಾಡಬೇಕು ಎಂಬುದನ್ನು ಅವರು ಮೊದಲು ಹೇಳಬೇಕು” ಎಂದಿದ್ದಾರೆ.

ಕೂಸು ಹುಟ್ಟುವ ಮುಂಚೆ ಕುಲಾವಿ
ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿದರು ಎಂಬಂತೆ, ವಿರೋಧ ಪಕ್ಷದವರು ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತಿರಲು ಕಾರಣ ಏನು? ಎಂಬುದನ್ನೂ ಡಿಕೆ ಸುರೇಶ್ ವಿವರಿಸಿದ್ದಾರೆ. “ಮಲಗಿದ್ದವರೆಲ್ಲ ಈಗ ಎದ್ದಿದ್ದಾರೆ, ಹೀಗಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿದ್ದು, ವಿರೋಧ ಪಕ್ಷದ ಶಾಸಕರಂತೆ ಕೆಲಸ ಮಾಡಬೇಕಿದೆ. ಅವರ ಹೇಳಿಕೆಗಳು ಬರೀ ಕಾರ್ಯಕರ್ತರಲ್ಲಿ ಮಾತ್ರವಲ್ಲ, ಎಲ್ಲರಲ್ಲೂ ಗೊಂದಲ ಉಂಟು ಮಾಡುತ್ತದೆ” ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.


ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಸುರೇಶ್!
“ಕೆಲವರು ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಮನಸ್ಥಿತಿ ಉಳ್ಳವರು. ನಿಜವಾದ ಕಾಂಗ್ರೆಸ್ ನಾಯಕರಾರೂ ಈ ರೀತಿ ಮಾತನಾಡುವುದಿಲ್ಲ, ಅನಗತ್ಯ ಭಾವನೆ ವ್ಯಕ್ತಪಡಿಸುವುದಿಲ್ಲ. ಅವರು ಕಾಂಗ್ರೆಸ್ ಶಿಸ್ತನ್ನು ಕಲಿತಿರುತ್ತಾರೆ. ಅಧಿಕಾರಕ್ಕಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಬಂದವರನ್ನು, ಅಧಿಕಾರಕ್ಕೆ ಜೋತು ಬಿದ್ದವರನ್ನು ಯಾರು, ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಸಂಸದ ಡಿಕೆ ಸುರೇಶ್ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪರೋಕ್ಷ ತಿರುಗೇಟು ನೀಡಿದ್ದಾರೆ.


ಪಕ್ಷದ ವೇದಿಕೆಯಲ್ಲಿ ಚರ್ಚೆ
“ಶಿಸ್ತು, ಅಶಿಸ್ತಿನ ವಿಚಾರವನ್ನು ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತದೆ. ಯಾರು ಅಧಿಕಾರಕ್ಕೆ ಅಂಟಿಕೊಂಡಿದ್ದಾರೋ ಅವರು ಅಶಿಸ್ತನ್ನು ಅಭ್ಯಾಸ ಮಾಡಿಕೊಂಡಿದ್ದು, ನಿಜವಾದ ಕಾಂಗ್ರೆಸಿಗರು ಕಾಂಗ್ರೆಸ್ ಅಧಿಕಾರಕ್ಕೆ ತರುವ ಪ್ರಯತ್ನದಲ್ಲಿದ್ದಾರೆ” ಎಂದು ಸಿದ್ದರಾಮಯ್ಯ ಬೆಂಬಲಿಗ ಶಾಸಕರಿಗೆ ಡಿಕೆ ಸುರೇಶ್ ಎಚ್ಚರಿಕೆ ಕೊಟ್ಟಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರು ಇದನ್ನು ನಿಯಂತ್ರಿಸಬೇಹುದಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್ ಅವರು, “ನಾನು ಆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯನವರು, ಪಕ್ಷದ ರಾಜ್ಯ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ನೇಮಕವಾಗಿದ್ದಾರೆ. ಅವರಿಬ್ಬರೂ ಅವರವರ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯದಲ್ಲಿರುವವರಿಗೆ ಏನು ಕೆಲಸ? ಅವರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕಾದ ಜವಾಬ್ದಾರಿ ಇದೆ. ಕರೋನಾ ಸಮಯದಲ್ಲಿ ಆಡಳಿತ ಪಕ್ಷದ ವೈಫಲ್ಯ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಎಂ ಹುದ್ದೆ ಸೇರಿ ಸದ್ಯಕ್ಕೆ ಯಾವುದೇ ಸ್ಥಾನ ಖಾಲಿ ಇಲ್ಲ. ಖಾಲಿ ಆದಾಗ ಯಾರ್ಯಾರು ಚರ್ಚೆಗೆ ಬರುತ್ತಾರೋ ಅವರಿಗೆಲ್ಲ ಆಗ ಸವಾಲು ಮಾಡೋಣ” ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...