ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲೇ ಕೊಡ್ತಾರಾ ಲಸಿಕೆ? ಇಲ್ಲಿದೆ ಮಾಹಿತಿ

Date:

ಕರ್ನಾಟಕ ಸರ್ಕಾರ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕುರಿತು ಆದೇಶ ಹೊರಡಿಸಿದೆ. ಈ ಕುರಿತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ತಿಂಗಳು ಕಾಲೇಜುಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಅದಕ್ಕೂ ಪೂರ್ವವಾಗಿ ಪದವಿ ವಿದ್ಯಾರ್ಥಿಗಳು, ಬೋಧಕ/ ಬೋಧಕೇತರ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗುತ್ತದೆ.


ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಲಸಿಕೆ ಅಭಿಯಾನ ನಡೆಸಲು ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಲೇಜುಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಕಾಲೇಜುಗಳಲ್ಲಿ ಅಭಿಯಾನ ಆಯೋಜಿಸಿ ಲಸಿಕೆ ಕೊಡಲಾಗುತ್ತದೆ.
ಜಿಲ್ಲೆಗಳು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿನ ಎಲ್ಲಾ 12+ ಕಾಲೇಜುಗಳ (ಪದವಿ/ ಡಿಪ್ಲೊಮಾ) ಪಟ್ಟಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ.

ಪ್ರತಿ ಕಾಲೇಜಿನ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳ (ವಿದ್ಯಾರ್ಥಿ/ ಬೋಧಕ/ ಬೆಂಬಲ ಸಿಬ್ಬಂದಿ) ಸಂಖ್ಯೆಯನ್ನು ಸಂಸ್ಥೆಯ ಮುಖ್ಯಸ್ಥರಿಂದ ಧೃಡೀಕರಿಸಿದ ಬಳಿಕ ಆರೋಗ್ಯ ಇಲಾಖೆಗೆ ಲಸಿಕಾಕರಣದ ಸಿದ್ಧತೆಗಾಗಿ ನೀಡಬೇಕು ಎಂದು ತಿಳಿಸಲಾಗಿದೆ.
ಲಸಿಕಾಕರಣ ಅಭಿಯಾನಕ್ಕಾಗಿ ಪ್ರತಿ ಕಾಲೇಜು ಮುಖ್ಯಸ್ಥರು ಒಬ್ಬ ಜವಾಬ್ದಾರಿಯುತ ನೋಡೆಲ್ ಅಧಿಕಾರಿಯನ್ನು ನಿಯೋಜನೆ ಮಾಡಬೇಕು ಎಂದು ಸೂಚಿಸಲಾಗಿದೆ. ಅಧಿಕಾರಿ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿರಬೇಕು.
ಅರ್ಹ ಫಲಾನುಭವಿಗಳಿಗೆ ಲಸಿಕೆ ಲಭ್ಯತೆ ಆಧಾರದ ಮೇಲೆ ಕಾಲೇಜು ಆವರಣದಲ್ಲಿಯೇ ಲಸಿಕೆ ನೀಡಲಾಗುತ್ತದೆ. ಎಲ್ಲಾ ಅರ್ಹರಿಗೂ ಲಸಿಕೆ ತಲುಪುವಂತೆ ನೋಡೆಲ್ ಅಧಿಕಾರಿ ಖಚಿತಪಡಿಸಿಕೊಳ್ಳಬೇಕು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...