ರಾಜ್ಯದಲ್ಲಿ ಜೂನ್ 28ರಿಂದ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 28 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ರಾಜ್ಯದಲ್ಲಿ ಇಳಿಕೆಯಾಗಿದ್ದ ಮಳೆ ಇದೀಗ ಮತ್ತೆ ಅಬ್ಬರಿಸಲಿದೆ ಎನ್ನಲಾಗಿದೆ. ಮತ್ತೆ ಕರಾವಳಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜೂನ್ 28ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ನಾಳೆಯಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಜೂನ್ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ನಾಳೆಯಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗುವ ನಿರೀಕ್ಷೆಯಿದೆ.