ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಜೊತೆ ಮಂಗಳವಾರ ಮಹತ್ವದ ಸಭೆ ನಡೆಸಿದರು.
ಮಂಗಳವಾರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇಶದ ರಕ್ಷಣಾ ಕ್ಷೇತ್ರದ ವಿಚಾರವಾಗಿ ಚರ್ಚೆ ನಡೆಸಲಾಗಿದೆ. ಭಾರತ ತನ್ನದೇ ಆದ ಡ್ರೋನ್ ಹಾರಾಟದ ಬಗ್ಗೆ ನಿಯಮಗಳನ್ನು ರೂಪಿಸಲಿದೆ.
ರಕ್ಷಣಾ ಸಚಿವರು, ಗೃಹ ಸಚಿವರ ಜೊತೆ ಡ್ರೋನ್ ಹಾರಾಟಕ್ಕೆ ನಿಯಮಗಳನ್ನು ರೂಪಿಸುವ ಬಗ್ಗೆ ಮೋದಿ ಚರ್ಚೆ ನಡೆಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.