ಬರೋಬ್ಬರಿ 44 ಲಕ್ಷ ವ್ಯಾಕ್ಸಿನ್ ರೆಡಿ

Date:

”ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 33.63 ಕೋಟಿಗೂ ಅಧಿಕ ಕೋವಿಡ್‌ ಲಸಿಕೆ ಡೋಸ್‌ಗಳನ್ನು ಒದಗಿಸಿದೆ. ಪ್ರಸ್ತುತ 44,90,000 ಡೋಸ್ ಲಸಿಕೆ ಸಾಗಣೆ ಮಾಡಲಾಗುತ್ತಿದ್ದು, ಮುಂದಿನ 3 ದಿನಗಳಲ್ಲಿ ಅವುಗಳು ರಾಜ್ಯಗಳಿಗೆ ಲಭ್ಯವಾಗಲಿದೆ,” ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.


ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ”ದೇಶದಾದ್ಯಂತ ಕೋವಿಡ್ -19 ಲಸಿಕೆಯ ಅಭಿಯಾನ ವಿಸ್ತರಿಸುವ ಮತ್ತು ಅದರ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. 2021ರ ಜೂನ್ 21ರಿಂದ ಕೋವಿಡ್ -19 ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹೊಸ ವೇಗ ಪಡೆದುಕೊಂಡಿದೆ,” ಎಂದು ಹೇಳಿದೆ.
”ಲಸಿಕೆಯ ಲಭ್ಯತೆಯ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕಾ ಅಭಿಯಾನವನ್ನು ಉತ್ತಮವಾಗಿ ಸಕ್ರಿಯಗೊಳಿಸಲು ಸಹಕರಿಸಲಾಗಿದೆ. ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ ಲಸಿಕೆ ಅಭಿಯಾನ ವೇಗವನ್ನು ಹೆಚ್ಚಿಸಲಾಗಿದೆ,” ಎಂದು ಮಾಹಿತಿ ನೀಡಿದೆ.


ಇನ್ನು ”ಈಗಾಗಲೇ ದೇಶವ್ಯಾಪಿ ಕೋವಿಡ್‌ ಲಸಿಕಾ ಅಭಿಯಾನದ ಭಾಗವಾಗಿ, ಭಾರತ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ಒದಗಿಸುತ್ತಿದೆ. ಕೋವಿಡ್ -19 ಲಸಿಕೆ ಅಭಿಯಾನದ ಸಾರ್ವತ್ರೀಕರಣದ ನೂತನ ಹಂತದಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿನ ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಯ ಪೈಕಿ ಶೇ.75ರಷ್ಟನ್ನು ಖರೀದಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸುತ್ತಿದೆ,” ಎಂದು ಪುನರುಚ್ಚರಿಸಿದೆ.
”ಕೇಂದ್ರ ಸರ್ಕಾರವು ಈವರೆಗೆ ರಾಜ್ಯಗಳಿಗೆ 33.63 ಕೋಟಿ (33,63,78,220) ಕೋವಿಡ್‌ ಲಸಿಕೆ ಡೋಸ್‌ಗಳನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ (ಉಚಿತ ಮಾರ್ಗದಲ್ಲಿ) ಮತ್ತು ರಾಜ್ಯಗಳಿಂದಲೇ ನೇರವಾಗಿ ಖರೀದಿಸುವ ಪ್ರವರ್ಗದ ಮೂಲಕ ಪೂರೈಕೆ ಮಾಡಿದೆ. ಇಂದು ಬೆಳಗ್ಗೆ 8 ಗಂಟೆಯವರೆಗೆ ಲಭ್ಯವಾದ ಮಾಹಿತಿಯ ಪ್ರಕಾರ ವ್ಯರ್ಥವಾದ ಲಸಿಕೆ ಸೇರಿದಂತೆ ಒಟ್ಟು 33,73,22,514 ಡೋಸ್‌ ಲಸಿಕೆ ಬಳಕೆಯಾಗಿದೆ. ಪ್ರಸ್ತುತ 44,90,000 ಡೋಸ್ ಲಸಿಕೆ ಸಾಗಣೆ ಮಾಡಲಾಗುತ್ತಿದ್ದು, ಮುಂದಿನ 3 ದಿನಗಳಲ್ಲಿ ಅವುಗಳನ್ನು ರಾಜ್ಯಗಳು ಪಡೆದುಕೊಳ್ಳಲಿವೆ,” ಎಂದು ಪ್ರಕಟಣೆ ತಿಳಿಸಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...