ರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕವಾಗಿದೆ. ಥಾವರ್ ಚಂದ್ ಗೆಹ್ಲೋಟ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದು, ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ರಾಜ್ಯಸಭಾ ಸದಸ್ಯರಾಗಿರುವ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾಗಿದ್ದಾರೆ.
ಹಲವು ರಾಜ್ಯಗಳಿಗೆ ಮಂಗಳವಾರ ರಾಜ್ಯಪಾಲರನ್ನು ನೇಮಕ ಮಾಡಲಾಗಿದ್ದು, ಕರ್ನಾಟಕಕ್ಕೆ ಥಾವರ್ ಚಂದ್ ಗೆಹ್ಲೋಟ್ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.