ಬಾಲಿವುಡ್ ದಿಗ್ಗಜ ದಿಲಿಪ್ ಕುಮಾರ್ ಇನ್ನಿಲ್ಲ

Date:

ಹಿಂದಿ ಚಿತ್ರರಂಗದ ದಿಗ್ಗಜ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ 7:30ಕ್ಕೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾದರು.
98 ವರ್ಷ ವಯಸ್ಸಿನ ಹಿರಿಯ ನಟ ದಿಲೀಪ್ ಕುಮಾರ್ ಬಹುಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ದಿಲೀಪ್‌ರನ್ನು ಹಲವು ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಜೂನ್ 30 ರಂದು ಮುಂಬೈನ ಹಿಂದೂಜಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು. ಇದಕ್ಕೂ ಮೊದಲು ದಿಲೀಪ್ ಕುಮಾರ್ ಅವರು ಜೂನ್ 6 ರಂದು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಐದು ದಿನಗಳ ನಂತರ ಬಿಡುಗಡೆಯಾಗಿದ್ದರು.


ಬಾಲಿವುಡ್‌ನ ‘ಟ್ರಾಜಿಡಿ ಕಿಂಗ್’ ಎಂದೇ ಕರೆಯಲ್ಪಡುವ ಹಿರಿಯ ನಟ ಆರು ದಶಕಗಳವರೆಗಿನ ತಮ್ಮ ವೃತ್ತಿಜೀವನದಲ್ಲಿ 65 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ
‘ದೇವದಾಸ್’ (1955), ‘ನಯಾ ದೌರ್’ (1957), ‘ಮೊಘಲ್-ಎ-ಅಜಮ್’ (1960), ‘ಗಂಗಾ ಜಮುನಾ’ (1961), ‘ಕ್ರಾಂತಿ’ (1981), ಮತ್ತು ‘ಕರ್ಮ’ (1986) ಈ ಸಿನೆಮಾಗಳು ದಿಲೀಪ್‌ ಮಿಂಚಿದ್ದಾರೆ. ಕೊನೆಯ ಬಾರಿಗೆ 1998 ರಲ್ಲಿ ‘ಕಿಲಾ’ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...