ಮೆಟ್ರೋ ಹತ್ತುವ ಮುನ್ನ ಈ ದಂಡಗಳ ಬಗ್ಗೆ ತಿಳಿಯಿರಿ

Date:

ಕೊರೊನಾ ನಿಯಮ ಪಾಲಿಸದೇ ಇದ್ದಲ್ಲಿ ಮೆಟ್ರೋ ಪ್ರಯಾಣಿಕರಿಗೆ ದಂಡ ಬೀಳುವುದು ಗ್ಯಾರಂಟಿ.
ಹೌದು, ನಮ್ಮ ಮೆಟ್ರೋದಲ್ಲಿ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು, ಇಲ್ಲವಾದಲ್ಲಿ ಭಾರಿ ಮೊತ್ತದ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಬಿಎಂಆರ್‌ಸಿಎಲ್ ಎಚ್ಚರಿಸಿದೆ.
ಮೆಟ್ರೋ ನಿಲ್ದಾಣ ಹಾಗೂ ರೈಲಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸುವವರಿಗೆ 250 ರೂ. ದಂಡ ವಿಧಿಸಲಾಗುತ್ತದೆ. ನಿಯಮ ಉಲ್ಲಂಘಿಸುವವರ ಮೇಲೆ ಕಣ್ಗಾವಲಿಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ.


ಕಳೆದ ಒಂದು ವಾರದಿಂದಲೂ ಪ್ರಯಾಣಿಕರ ಮೇಲೆ ನಮ್ಮ ಮೆಟ್ರೋ ದಂಡಾಸ್ತ್ರ ಪ್ರಯೋಗಿಸುತ್ತಿದೆ. ಮೆಟ್ರೋದಲ್ಲಿ ಶೇ.100ರಷ್ಟು ಪ್ರಯಾಣಿಕರಿಗೆ ಅನುಮತಿ ನೀಡಿದ ಬಳಿಕ ದಂಡ ಪ್ರಕ್ರಿಯೆ ಜಾರಿ ಮಾಡಲಾಗಿದೆ.ಒಂದು ವಾರದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಪ್ರಯಾಣಿಕರಿಂದ 1,77,250 ರೂ. ವಸೂಲಿ ಮಾಡಲಾಗಿದೆ.
ಎಂದಿನಂತೆ ಜನ ಪ್ರಯಾಣ ಶುರು ಮಾಡಿದ್ದಾರೆ. ಆದರೆ ಮೆಟ್ರೋ ರೈಲಿನಲ್ಲಿ ಕೊವಿಡ್ ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿದ್ದವು.
ಮೆಟ್ರೋ ರೈಲಿನಲ್ಲಿ ಫೇಸ್ ಮಾಸ್ಕ್, ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮೆಟ್ರೋ ನಿಲ್ದಾಣ ಹಾಗೂ ಮೆಟ್ರೋ ರೈಲಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದಿದ್ದರೆ, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತಿದೆ.


ನಮ್ಮ ಮೆಟ್ರೋದಲ್ಲಿ ನಿತ್ಯ ಎಷ್ಟೆಷ್ಟು ದಂಡ ಸಂಗ್ರಹ
05/07/2021 – 20,950/- ರೂ
06/07/2021 – 25,950/- ರೂ
07/07/2021 – 28,350/- ರೂ
08/07/2021 – 33,550/- ರೂ
09/07/2021 – 36,850/- ರೂ
10/07/2021 – 31,600/- ರೂ
ಒಟ್ಟು, 1,77,250/- ರೂ ದಂಡ ಸಂಗ್ರಹವಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...