ಕೆನರಾ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಸಲ್ಲಿಸಿ

Date:

ಕೆನರಾ ಬ್ಯಾಂಕ್ ಜ್ಯುನಿಯರ್ ಆಫೀಸರ್ಸ್‌ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 31, 2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಒಟ್ಟು 5 ಜ್ಯುನಿಯರ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ವೇತನ 19,200 ರೂ. ಪ್ರತಿ ತಿಂಗಳು.


ಕೆನರಾ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 31 ಮಾರ್ಚ್ 2021ರಂತೆ ಕನಿಷ್ಠ 21 ಗರಿಷ್ಠ 30 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಕೆನರಾ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಡಿಡಿ ರೂಪದಲ್ಲಿ 250 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.


ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಸ್ವಯಂ ದೃಢೀಕರಿಸಿದ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿಗಳನ್ನು ಜುಲೈ 31ರೊಳಗೆ ಸಲ್ಲಿಸಬೇಕಿದೆ. ರಿಜಿಸ್ಟರ್ ಅಥವ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕಿದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ; The Executive Vice President, Canbank Factors Ltd, No. 67/1, Kanakapura Main Road (Near Lalbagh West Gate), Basavanagudi, BENGALURU – 560004
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೆಬ್‌ ಸೈಟ್‌ಗೆ ಭೇಟಿ ನೀಡಬಹುದು canarabank.com

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...