ನೇಪಾಳದ ಪ್ರಧಾನಿಯಾಗಿ ನೇಪಾಳಿ ಕಾಂಗ್ರೆಸ್ ಮುಖ್ಯಸ್ಥ ಶೇರ್ ಬಹದ್ದೂರ್ ದೇವುಬಾ ಅವರು ಮಂಗಳವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು.
ಮುಂದಿನ ಎರಡು ದಿನಗಳ ಒಳಗೆ ಶೇರ್ ಬಹದ್ದೂರ್ ದೇವುಬಾ ಅವರನ್ನು ಪ್ರಧಾನಿಯಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶುಮ್ಮರ್ ರಾಣಾ ನೇತೃತ್ವದ ಐದು ಸದಸ್ಯರ ಸಾಂವಿಧಾನಿಕ ಪೀಠ ಸೋಮವಾರ ಆದೇಶಿಸಿದ್ದು, ಮಂಗಳವಾರ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಾಧ್ಯಕ್ಷರಾದ ವಿದ್ಯಾದೇವಿ ಭಂಡಾರಿ ಅವರು ತಮ್ಮನ್ನು ಪ್ರಧಾನಿಯಾಗಿ ನೇಮಿಸಿದ ನೋಟಿಸ್ ಪರಿಷ್ಕರಿಸುವವರೆಗೆ ಪ್ರತಿಜ್ಞಾ ವಿಧಿ ಸ್ವೀಕರಿಸುವುದಿಲ್ಲ ಎಂದು ಶೇರ್ ಬಹದ್ದೂರ್ ದೇವುಬಾ ಹೇಳಿದ್ದರು.
ನಂತರ ಮಂಗಳವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ದೇವುಬಾ ಅವರು ಐದನೇ ಬಾರಿ ಪ್ರಧಾನಿಯಾಗಿದ್ದಾರೆ.