ತ. ನಾಡು ಮಾತ್ರವಲ್ಲ ಪುದುಚೇರಿಯಿಂದಲೂ ಮೇಕೆದಾಟಿಗೆ ಅಡ್ಡಿ

Date:

ತಮಿಳುನಾಡಿನ ನಂತರ ಇದೀಗ ಪುದುಚೇರಿ, ಮೇಕೆದಾಟುವಿನಲ್ಲಿ ಕರ್ನಾಟಕ ರಾಜ್ಯ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ.

ಮೇಕೆದಾಟು ವಿಚಾರದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡುವಂತೆ ಮನವಿ ಮಾಡಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವುದಾಗಿ ಪುದುಚೇರಿ ಸಿಎಂ ಎನ್. ರಂಗಸಾಮಿ ತಿಳಿಸಿದ್ದಾರೆ.

ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕಕ್ಕೆ ಅನುಮತಿ ನೀಡದಂತೆ ಪತ್ರದಲ್ಲಿ ಕೋರಿರುವುದಾಗಿ ತಿಳಿದುಬಂದಿದೆ. ಬುಧವಾರ ಸಿಎಂ ರಂಗಸಾಮಿ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದ್ದು, ಸಭೆ ನಂತರ ಪತ್ರ ಬರೆದಿರುವುದಾಗಿ ತಿಳಿದುಬಂದಿದೆ.

 

ಕರ್ನಾಟಕ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಿದರೆ ಪುದುಚೇರಿಯ ಕಾರೈಕಲ್ ಪ್ರದೇಶದ ಮೇಲೆ ಪರಿಣಾಮ ಬೀರಲಿದೆ ಎಂದು ರಂಗಸಾಮಿ ತಿಳಿಸಿದ್ದಾರೆ. “ಕಾರೈಕಲ್ ಪ್ರದೇಶದಲ್ಲಿ ಈ ಯೋಜನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇಲ್ಲಿನ ಕೃಷಿ ಚಟುವಟಿಕೆ, ಕುಡಿಯುವ ನೀರಿಗೂ ಹೊಡೆತ ಬೀಳಲಿದೆ” ಎಂದು ಹೇಳಿದ್ದಾರೆ.

ಕುಡಿಯುವ ನೀರಿನ ಉದ್ದೇಶದ ಮೇಕೆದಾಟು ಯೋಜನೆಗೆ ಸಂಬಂಧಿಸಿದ ಕರ್ನಾಟಕದ ಪ್ರಸ್ತಾವನೆಗೆ ನ್ಯಾಯ ಒದಗಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭರವಸೆ ನೀಡಿದ್ದರು.

ಈ ನಡುವೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್, “ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ತೀರ್ಪಿನ ವಿರುದ್ಧ ಅಣೆಕಟ್ಟು ನಿರ್ಮಿಸುವುದಾಗಿ ಹೇಳುವ ಹಕ್ಕು ಕರ್ನಾಟಕಕ್ಕೆ ಇದ್ದರೆ, ಕಾನೂನು ಮಾರ್ಗದ ಮೂಲಕ ಯೋಜನೆ ಸ್ಥಗಿತಗೊಳಿಸುವ ಹಕ್ಕು ನಮಗೂ ಇದೆ” ಎಂದು ಹೇಳಿದ್ದರು.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...