ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ : ಬಿಎಸ್ ವೈ

Date:

ನವದೆಹಲಿ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅದು ಕೇವಲ ಗಾಳಿ ಸುದ್ದಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕದ ಭವನದಲ್ಲಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೂ ಮುನ್ನ ಮಾಧ್ಯಮಗಳ ಜೊತೆ ಸಿಎಂ ಯಡಿಯೂರಪ್ಪ ಮಾತನಾಡಿದರು. ನಿನ್ನೆ ಪ್ರಧಾನಿಗಳನ್ನು ಭೇಟಿಯಾಗಿದ್ದು, ಆ ರೀತಿಯ ಮಾತುಕತೆಗಳು ನಡೆದಿಲ್ಲ. ನಾನು ರಾಜೀನಾಮೆಯನ್ನೂ ನೀಡಿಲ್ಲ. ರಾಜ್ಯದ ಅಭಿವೃದ್ಧಿ ಕುರಿತ ಮಾತನಾಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ದೆಹಲಿಗೆ ಬರುತ್ತಿದ್ದೇನೆ. ರಾಜೀನಾಮೆ ನೀಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಎಲ್ಲ ಗಾಳಿಸುದ್ದಿಗಳಿಗೆ ಮುಖ್ಯಮಂತ್ರಿಗಳು ತೆರೆ ಎಳೆದರು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ರಾಜ್ಯಕ್ಕೆ ಹಿಂದಿರುಗಲಿದ್ದಾರೆ.

ಶುಕ್ರವಾರ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿಯವರನ್ನು ಭೇಟಿಯಾಗಿದ್ದರು. ಮೇಕೆದಾಟು ಯೋಜನೆಗೆ ಅನುಮತಿ, ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ, ಪೆರಿಫೆರಲ್ ರಿಂಗ್ ರೋಡ್‍ಗೆ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಹೇಳಿದ್ದರು. ಜೊತೆಗೆ ರಾಜ್ಯದ ನೂತನ ಸಚಿವರನ್ನು ಭೇಟಿಯಾಗಿ ಶುಭಾಶಯ ತಿಳಿಸಿದರು.

ನಾಯಕತ್ವ ಬದಲಾವಣೆ ವಿಚಾರ, ಸಂಪುಟ ಪುನಾರಚನೆ ವದಂತಿಗಳ ಮಧ್ಯೆ, ಮುಖ್ಯಮಂತ್ರಿ ಯಡಿಯೂರಪ್ಪ ಎರಡು ದಿನಗಳ ದೆಹಲಿ ಪ್ರವಾಸದಲ್ಲಿದ್ದಾರೆ. ಸಿಎಂ ಜೊತೆ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಹಾಗೂ ಲೆಹರ್ ಸಿಂಗ್ ಸೇರಿದಂತೆ 7 ಮಂದಿ ಜೊತೆಗಿದ್ದಾರೆ.

 

Share post:

Subscribe

spot_imgspot_img

Popular

More like this
Related

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ! ಬೆಂಗಳೂರು:  ಸಿಲಿಕಾನ್ ಸಿಟಿ...

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ! ಬೆಂಗಳೂರು: ಕೋಟಿ...

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ ದಕ್ಷಿಣ ಕನ್ನಡ:...

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ ಇತ್ತೀಚಿನ ದಿನಗಳಲ್ಲಿ...