ವಿಶ್ವವಿದ್ಯಾಲಯಗಳಲ್ಲಿ ಬದಲಾದ ಶೈಕ್ಷಣಿಕ ವರ್ಷ

Date:

ದೇಶಾದ್ಯಂತ ಎಲ್ಲಾ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಅಕ್ಟೋಬರ್ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಯುಜಿಸಿ ತಿಳಿಸಿದೆ. ಇದರೊಂದಿಗೆ, ಸೆಪ್ಟೆಂಬರ್30ರ ಒಳಗೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

12ನೇ ತರಗತಿ ಫಲಿತಾಂಶ ಪ್ರಕಟವಾದ ನಂತರವಷ್ಟೆ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳುತ್ತದೆ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ತಿಳಿಸಿದ್ದಾರೆ.

ಹೊಸ ಶೈಕ್ಷಣಿಕ ವರ್ಷದ ಸಂಬಂಧ ಯುಜಿಸಿ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಲ್ಲಿ “ಎಲ್ಲಾ ಕಾಲೇಜು ಮಂಡಳಿಗಳು ಜುಲೈ 31ರ ಒಳಗೆ 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕಿದೆ. ಆನಂತರ ವಿದ್ಯಾರ್ಥಿಗಳ ದಾಖಲಾತಿ ಆರಂಭವಾಗುವುದು. ಅಕಸ್ಮಾತ್ ಪರೀಕ್ಷೆ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾದರೆ ಅಕ್ಟೋಬರ್ 18ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸಲಾಗುವುದು” ಎಂದು ತಿಳಿಸಿದೆ.

ಬೋಧನೆಯು ಆಫ್‌ಲೈನ್, ಆನ್‌ಲೈನ್ ಅಥವಾ ಎರಡು ಆಯ್ಕೆಗಳನ್ನು ಒಳಗೊಳ್ಳಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊರೊನಾ ಮಾರ್ಗಸೂಚಿಗಳ ಪಾಲನೆಯೊಂದಿಗೆ ಅಕ್ಟೋಬರ್‌ 1ರಿಂದ ಆರಂಭಿಸಿ, ಮುಂದಿನ ಜುಲೈ 31ರವರೆಗೆ ತರಗತಿ, ಪರೀಕ್ಷೆಗಳ ಕುರಿತು ಯೋಜನೆ ರೂಪಿಸಹುದು ಎಂದು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗಿದೆ. ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳು ಪದವಿ ಅಂತಿಮ ವರ್ಷದ ಪರೀಕ್ಷೆಗಳನ್ನು ಆಗಸ್ಟ್ 31ರೊಳಗೆ ನಡೆಸಬೇಕು ಎಂದು ಆದೇಶಿಸಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...