ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಲಯದಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು 26 ಜುಲೈ ತನಕ ಅರ್ಜಿ ಸಲ್ಲಿಸಬಹುದು.
ಒಟ್ಟು 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,250 ರಿಂದ 26,250 ರೂ. ವೇತನವನ್ನು ನಿಗದಿ ಮಾಡಲಾಗಿದೆ.
T.G. Teacher 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಬಿಎಸ್‌ಸಿ, ಬಿಎ, ಬಿಎಡ್, ಬಿ.ಪಿಎಚ್‌ಡಿ ವ್ಯಾಸಂಗ ಮಾಡಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 26,250 ರೂ. ವೇತನವಿದೆ. PRT 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬಿಎಸ್‌ಸಿ, ಬಿಎ, ಬಿಎಡ್, ಪಿಯುಸಿ, ಡಿಎಡ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 21,250 ರೂ. ವೇತನವನ್ನು ನಿಗದಿಗೊಳಿಸಲಾಗಿದೆ.
ನೈಋತ್ಯ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 65 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ನಿಯಮಗಳ ಪ್ರಕಾರ ವಯೋಮಿತಿ ವಿನಾಯಿತಿ ಸಹ ಸಿಗಲಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ rhshubli.1903@gmail.com ವಿಳಾಸಕ್ಕೆ ಜುಲೈ 26ರೊಳಗೆ ಅಗತ್ಯ ದಾಖೆಗಳ ಜೊತೆ ಸಲ್ಲಿಸಬೇಕು.