ಚಾಮುಂಡಿ ಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ತಿಳಿಯಿರಿ

Date:

ಚಾಮುಂಡಿ ಬೆಟ್ಟ ಹಾಗೂ ಉತ್ತನಹಳ್ಳಿ ಜ್ವಾಲಾತ್ರಿಪುರ ಸುಂದರಿ ದೇವಾಲಯಗಳಿಗೆ ಆಷಾಢ ಮಾಸದ ಅಮಾವಾಸ್ಯೆಗಳು, ಶುಕ್ರವಾರಗಳು, ಚಾಮುಂಡಿ ವರ್ಧಂತಿ ಹಾಗೂ ಆಷಾಢ ಮಾಸದಲ್ಲಿ ಬರುವ ಎಲ್ಲಾ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.

ಗುರುವಾರ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಈ ನಿರ್ಬಂಧಿತ ದಿನಗಳಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಬಾರದು ಎಂದು ಶ್ರೀ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಆದೇಶದ ಅನ್ವಯ ನಿರ್ಬಂಧಿತ ದಿನಗಳಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆದು ಬಂದಿರುವ ರೂಢಿ ಸಂಪ್ರದಾಯದಂತೆ, ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಾಲಯದ ಅಧಿಕಾರಿಗಳು, ಅರ್ಚಕರು ಸಿಬ್ಬಂದಿಗಳು, ಮಾತ್ರ ಪಾಲ್ಗೊಳ್ಳಲು ಅನುಮತಿ ಇದೆ.

ಪ್ರಸಾದ ವಿತರಣೆಯೂ ಇಲ್ಲ; ಮೆಟ್ಟಿಲು ಮಾರ್ಗದ ಮೂಲಕ ಚಾಮುಂಡಿ ಬೆಟ್ಟಕ್ಕೆ ಭಕ್ತರು ಮತ್ತು ಸಾರ್ವಜನಿಕರು ಬರುವುದನ್ನು ನಿಷೇಧಿಸಲಾಗಿದೆ. ಎರಡು ದೇವಾಲಯಗಳಲ್ಲಿ ದೇವಾಲಯದ ವತಿಯಿಂದಾಗಲಿ ಅಥವಾ ದಾನಿಗಳ ವತಿಯಿಂದಾಗಲಿ ದಾಸೋಹ, ಊಟದ ವ್ಯವಸ್ಥೆ ಮಾಡುವುದು ಅಥವಾ ಪ್ರಸಾದ ವಿತರಣೆಯನ್ನು ಸಹ ನಿಷೇಧಿಸಿದೆ.

ವಾಹನ ಸಂಚಾರ ನಿರ್ಬಂಧ; ಜಿಲ್ಲಾಡಳಿತ ಆದೇಶದಂತೆ ಪೂರ್ತಿದಿನ ಹಾಗೂ ಇತರೆ ದಿನಗಳಂದು ಸಂಜೆ 6 ಗಂಟೆಯ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ಚಾಮುಂಡಿಬೆಟ್ಟದ ಗ್ರಾಮಸ್ಥರ ವಾಹನಗಳು ಮತ್ತು ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಇತರ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಭಂಧಿಸಲಾಗಿದೆ.

ದೇವಾಲಯದ ಸಂಪ್ರಾದಾಯ ಮತ್ತು ಪದ್ಧತಿಯಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವಾಗ ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು ಹಾಗೂ ಚಾಮುಂಡಿಬೆಟ್ಟದ ಗ್ರಾಮಸ್ಥರಿಗೆ ಮಾತ್ರ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಇಂತಹ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ಸೋಂಕು ಹರಡದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ಮಹಾಮಂಗಳಾರತಿ ಮುಕ್ತಾಯಗೊಂಡ ತಕ್ಷಣ ದೇವಾಲಯವನ್ನು ಮುಚ್ಚಲಾಗುತ್ತದೆ.

 

 

 

 

 

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...