ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಕೇಂದ್ರ ಸರ್ಕಾರದಿಂದ 9,725.15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದ್ದಾರೆ. ಇದರ ಮಧ್ಯೆ ಎಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಎನ್ನುವುದರ ಕುರಿತು ಮಾಹಿತಿಗಾಗಿ ಮುಂದೆ ಓದಿ.
ಕಳೆದೊಂದು ದಿನದಲ್ಲಿ ಪ್ರತಿ ಗಂಟೆಗೆ 2 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 188 ದಿನಗಳೇ ಕಳೆದಿದ್ದು, ಈವರೆಗೂ 42 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಗುರುವಾರ ರಾತ್ರಿ 7 ಗಂಟೆ ವೇಳೆಗೆ 48,86,103 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 42,34,17,030 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.