ನಳಿನ್ ಕುಮಾರ್ ಕಟೀಲ್ ಮುಂದಿನ ಸಿಎಂ?!

Date:

ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಜೋರಾಗಿದೆ.

ಮುಖ್ಯಮಂತ್ರಿ ಕುರ್ಚಿ ರೇಸ್‌ನಲ್ಲಿ ಹಲವರ ಹೆಸರು ಕೇಳಿ ಬರುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೆಸರೂ ಪ್ರಸ್ತಾಪದಲ್ಲಿದೆ. ಕುತೂಹಲ ಎಂಬಂತೆ ಸಂಸದ ನಳಿನ್ ಕುಮಾರ್ ಕಟೀಲ್ ದೆಹಲಿ ಪ್ರಯಾಣ ಮಾಡಿದ್ದು, ಬೆಳಗ್ಗಿನ 11.30 ವಿಮಾನದಲ್ಲಿ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಗೆ ಹೋಗುವ ಮುನ್ನ ನಳಿನ್ ಕುಮಾರ್ ಕಟೀಲ್ ತವರು ಮನೆಯ ಪೂಜಿಸುವ ದೈವಗಳ ಆಶೀರ್ವಾದ ಪಡೆದಿದ್ದಾರೆ. ಅಲ್ಲದೇ ತಾಯಿ ಸುಶೀಲಾವತಿ. ಎನ್. ಶೆಟ್ಟಿಯವರ ಕಾಲು ಮುಟ್ಟಿ ಆಶೀರ್ವಾದ ಪಡೆದು ದೆಹಲಿ ಪ್ರಯಾಣ ಮಾಡಿದ್ದಾರೆ.

ಹೀಗಾಗಿ ಹೈಕಮಾಂಡ್ ಆತ್ಯಾಪ್ತರಾಗಿರುವ ನಳಿನ್ ಕುಮಾರ್ ಕಟೀಲ್‌ಗೆ ಕರ್ನಾಟಕ ಮುಖ್ಯಮಂತ್ರಿಯಾಗುವ ಯೋಗ ಇದೆಯಾ ಅನ್ನೋದು ಸದ್ಯ ಬಿಜೆಪಿ ಕಾರ್ಯಕರ್ತರ ಕುತೂಹಲ ಕೆರಳಿಸಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...