ವಿವಿಧ ಹುದ್ದೆಗಳು ಖಾಲಿ ಇವೆ; ಆಸಕ್ತರು ಅರ್ಜಿ ಸಲ್ಲಿಸಿ

Date:

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿವಿಧ ಕಂಪನಿಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 40ರ ವಯೋಮಿತಿಯವರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಜುಲೈ 29ರ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯ ತನಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆಯನ್ನು ನೀಡುವುದಿಲ್ಲ.

ಕಲಬುರಗಿಯ ಕರುಣಾ ಟೊಯೋಟಾದಲ್ಲಿ ಸ್ವಾಗತಕಾರ, ಶೋ ರೂಂ ಸೆಲ್ಸ್ ಎಕ್ಸಿಕ್ಯೂಟಿವ್, ಇನ್ಸುರೆನ್ಸ್ ಎಕ್ಸಿಕ್ಯೂಟಿವ್ ಹಾಗೂ ಸೇಲ್ಸ್ ಟ್ರೇನರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಪಿಯುಸಿ, ಮತ್ತು ಪದವಿ ವ್ಯಾಸಂಗ ಮಾಡಿರಬೇಕು. ಆಟೋಮೊಬೈಲ್‍ ಡಿಪ್ಲೊಮಾ ಪದವಿ ಪಡೆದವರು ಸಂದರ್ಶನಕ್ಕೆ ಹಾಜರಾಗಬಹುದು. ವಯೋಮಿತಿ 18 ರಿಂದ 45 ವರ್ಷ.

 

ಸೆಲ್ಸ್ ಆಫೀಸರ್, ಟೀಮ್ ಲಿಡರ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಡಿಪ್ಲೊಮಾ ಆಟೋಮೊಬೈಲ್, ಪಿಯುಸಿ ಹಾಗೂ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 40 ವರ್ಷಗಳು. ಭಾರತ್ ಫೈನಾನ್‍ಶಿಯಲ್ ಪೈವೇಟ್ ಲಿ. ಮನಿ ಆಫೀಸರ್, ಲೋನ್ ಆಫೀಸರ್ ಹಾಗೂ ಫೀಲ್ಡ್ ಅಸಿಸ್ಟಂಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. 10ನೇ ತರಗತಿ, ಪಿಯುಸಿ ಹಾಗೂ ಪದವಿ ಪಾಸಾದ 18 ರಿಂದ 28 ವರ್ಷದ ವಯೋಮಿತಿ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬೆಂಗಳೂರಿನ ನಿಡ್ಸ್ ಮ್ಯಾನ್‍ಪವರ್ ಎಜೆನ್ಸಿಯಲ್ಲಿ ಆಪರೇಟರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷ. ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಬಯೋಡಾಟಾ ಹಾಗೂ ಆಧಾರ್ ಕಾರ್ಡ್ ಸೇರಿದಂತೆ ಅವಶ್ಯಕ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-274846. ಸಂದರ್ಶನಕ್ಕೆ ಆಗಮಿಸುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

 

ಸಂದರ್ಶನ ನಡೆಯುವ ವಿಳಾಸ; ಕಲಬುರಗಿ ನಗರದ ಜೇವರ್ಗಿ ಕ್ರಾಸ್ ಸಮೀಪದಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...