ಒಲಿಂಪಿಕ್ಸ್: ಪಿವಿ ಸಿಂಧು ಕಡೆಯಿಂದ ಪದಕ ಫಿಕ್ಸ್!

Date:

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರು ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ. ಕ್ವಾರ್ಟರ್ ಫೈನಲ್‌ನಲ್ಲಿ ಸಿಂಧು ಅವರು ಜಪಾನ್‌ ಬಲಿಷ್ಠೆ ಅಕಾನೆ ಯಮಗುಚಿ ವಿರುದ್ಧ ನೇರ ಸೆಟ್‌ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಭಾರತಕ್ಕೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೂರನೇ ಪದಕದ ಆಸೆ ಮೂಡಿದೆ.

ಶುಕ್ರವಾರ (ಜುಲೈ 3) ನಡೆದ ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಅವರು ಅಕಾನೆ ಯಮಗುಚಿ ವಿರುದ್ಧ 21-13, 22-20ರ ಗೆಲುವು ದಾಖಲಿಸಿದ್ದಾರೆ. ಇಬ್ಬರ ಮಧ್ಯೆ ಸುಮಾರು 56 ನಿಮಿಷಗಳ ಕದನ ನಡೆಯಿತು. 26ರ ಹರೆಯದ ಸಿಂಧು 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಜಯಿಸಿದ್ದರು. ಈ ಬಾರಿಯೂ ಸಿಂಧು ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ನಿರೀಕ್ಷೆ ಮೂಡಿಸಿದ್ದಾರೆ. ಸಿಂಧುಗೆ ಪದಕ ಲಭಿಸಿದರೆ ಭಾರತಕ್ಕೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೂರನೇ ಪದಕ ಲಭಿಸಿದಂತಾಗುತ್ತದೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...