ಬಿಗ್ ಬಾಸ್ ಕನ್ನಡ ಎಂಟನೇ ಆವೃತ್ತಿ ಫಿನಾಲೆ ಹಂತಕ್ಕೆ ಬಂದು ತಲುಪಿದೆ. ಮನೆಯಲ್ಲಿರುವ ಸ್ಪರ್ಧಿಗಳೆಲ್ಲ ಟ್ರೋಫಿ ಗೆಲ್ಲುವ ಕನಸು ಕಾಣುತ್ತಿದ್ದಾರೆ. ಕೊರೋನಾ ಸಮಯದಲ್ಲಿಯೂ ಸಂಕಷ್ಟದ ನಡುವೆ ಬಿಗ್ ಬಾಸ್ ಸ್ಥಗಿತಗೊಂಡು ಮತ್ತೆ ಆರಂಭವಾಗಿ ಇದೀಗ ಫಿನಾಲೆ ಹಂತಕ್ಕೆ ಬಂದು ತಲುಪಿದೆ.
ಸದ್ಯ ಮನೆಯಲ್ಲಿರುವ ಐವರು ಸದಸ್ಯರು ಟ್ರೋಫಿ ಗೆಲ್ಲುವ ಕನಸನ್ನು ಕಾಣುತ್ತಿದ್ದು ಇದರಲ್ಲಿ ಇದೀಗ ಮಿಡ್ ವೀಕ್ ಎಲಿಮಿನೇಷನ್ ಬಂದಿದೆ. ಈ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ದಿವ್ಯ ಸುರೇಶ್ ಎಲಿಮಿನೇಟ್ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹೌದು ನೂರಕ್ಕೂ ಹೆಚ್ಚು ದಿನಗಳ ಕಾಲ ತಮ್ಮ ಜರ್ನಿಯನ್ನು ದಿವ್ಯ ಸುರೇಶ್ ಬಿಗ್ ಬಾಸ್ ಮನೆಯಲ್ಲಿ ಅಂತ್ಯಗೊಳಿಸಿದ್ದಾರೆ.
ಶಮಂತ್ ಕೂಡ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಔಟ್ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು ಆದರೆ ಇದೀಗ ಮೂಲಗಳ ಪ್ರಕಾರ ದಿವ್ಯ ಸುರೇಶ್ ಬಿಗ್ ಬಾಸ್ ಮನೆಯಿಂದ ಕೊನೆಯ ವಾರದ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಮನೆಯಿಂದ ಹೊರಬಿದ್ದಿದ್ದಾರೆ ಎನ್ನಲಾಗುತ್ತಿದೆ.