ಆಗಸ್ಟ್ 15ರವರೆಗೂ ರಾಜ್ಯದ ಈ ಊರುಗಳಲ್ಲಿ ಮಳೆಯ ಅಬ್ಬರ!

Date:

ರಾಜ್ಯದಲ್ಲಿ ಇನ್ನೂ ಮಳೆಯ ಅಬ್ಬರ ಮುಗಿದಿಲ್ಲ, ಆಗಸ್ಟ್ 15ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಕೊಂಚ ಬಿಡುವು ಪಡೆದಿದ್ದ ಮಳೆ ಮತ್ತೆ ಚುರುಕಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಯಾದಗಿರಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ತುಮಕೂರಿನಲ್ಲೂ ಮಳೆಯಾಗಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆ.12ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ಅವಧಿಯಲ್ಲಿಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇನ್ನು, ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು.

ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ. ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ನಷ್ಟ ಉಂಟಾಗಿದೆ.

ಕೇವಲ ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇಂದಿನಿಂದ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಉತ್ತರ ಭಾರತದಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿ ಸಂಭವಿಸಿದ್ದು, ಹಲವೆಡೆ ಡ್ಯಾಂಗಳ ಗೇಟ್ ತೆರೆದಿದ್ದರಿಂದ ಮಾಡಿದ್ದರಿಂದ ಅನೇಕ ಗ್ರಾಮಗಳೇ ಮುಳುಗಡೆಯಾಗಿವೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...