ಕೋವಿಡ್ ಎರಡನೇ ಆರಂಭವಾದ ನಂತರ ಬೆಂಗಳೂರು ನಗರವನ್ನು ಹೊರತು ಪಡಿಸಿ ಬಹುತೇಕ ಎರಡನೇ ಸ್ಥಾನದಲ್ಲಿದ್ದ ಕುಖ್ಯಾತಿಗೆ ಒಳಗಾಗಿದ್ದು ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ. ಈ ಎರಡೂ ಜಿಲ್ಲೆಗಳು ಬೇರೆ ರಾಜ್ಯದ ಗಡಿಗೆ ಹೊಂದಿಕೊಂಡಿದೆ.
ಜಿಲ್ಲಾಡಳಿತದ ಬಿಗಿ ಕ್ರಮಗಳಿಂದ ಮೈಸೂರು ಜಿಲ್ಲೆ ನಿಧಾನವಾಗಿ ಕೋವಿಡ್ ನಿಯಂತ್ರಿಸುವಲ್ಲಿ ಯಶಸ್ವಿಯಾಗುತ್ತಾ ಬರುತ್ತಿದೆ. ಆದರೆ, ದಕ್ಷಿಣ ಕನ್ನಡ ಇದೇ ದಾರಿಯಲ್ಲಿ ಸಾಗುತ್ತಿದೆ ಎಂದು ಹೇಳಲಾಗುವುದಿಲ್ಲ. ಯಾಕೆಂದರೆ, ದೈನಂದಿನ ಪ್ರಕರಣದಲ್ಲಿ ಜಿಲ್ಲೆ ಮೊದಲನೇ ಸ್ಥಾನದಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತದ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಸಭೆಯನ್ನು ನಡೆಸಿದ್ದರು. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೇಲೆ ಸಿಎಂ ಸಿಟ್ಟಾಗಿದ್ದು ಗೊತ್ತಿರುವ ವಿಚಾರ. ದಕ್ಷಿಣ ಕನ್ನಡದ ಭಾಗದಲ್ಲಿ ಕೇರಳದ ಪ್ರಭಾವ ಹೆಚ್ಚು. ತಲಪಾಡಿ ಮತ್ತು ಇತರ ಮಾರ್ಗಗಳ ಮೂಲಕ ಜಿಲ್ಲೆಗೆ, ಅದರಲ್ಲೂ ಪ್ರಮುಖವಾಗಿ ಜಿಲ್ಲಾಕೇಂದ್ರ ಮಂಗಳೂರಿಗೆ ದಿನೇ ಬಂದು ಹೋಗುವವರ ಸಂಖ್ಯೆ ಹೆಚ್ಚಿದೆ. ಕೇರಳದಲ್ಲಿ ದೇಶದ ಅರ್ಧದಷ್ಟು ಪ್ರಕರಣ ವರದಿಯಾಗುತ್ತಿರುವುದರಿಂದ ಕರ್ನಾಟಕ ಸರಕಾರ ಕೆಲವು ನಿರ್ಬಂಧನೆಗಳನ್ನು ವಿಧಿಸಿತ್ತು.