ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಮಾರ್ಗಸೂಚಿ

Date:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುತ್ತಾ ಬಂದಿದೆ. ಅದೇ ರೀತಿ ಪಾಲಿಕೆ ವ್ಯಾಪ್ತಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA) ಹಾಗೂ ಅಪಾರ್ಟ್ಮೆಂಟ್, ಕಾಂಪ್ಲೆಕ್ಸ್ ಗಳಲ್ಲಿ ನಿರ್ವಹಣಾ ಸಮಿತಿಗಳಿಗೆ ಕೊವಿಡ್-19 ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಅಡಿ ಕೊರೊನಾವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು ಸೂಚಿಸಲಾಗಿದೆ. ಈ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೆಕ್ಷನ್ 4ರ ಅಡಿ ರೋಗದ ಹರಡುವಿಕೆ ನಿಯಂತ್ರಿಸಲು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಅಧಿಕಾರವನ್ನು ಪಾಲಿಕೆಗೆ ವಹಿಸಲಾಗಿದೆ.

ಬೆಂಗಳೂರಿನ ನಿಗದಿತ ಪ್ರದೇಶವೊಂದರಲ್ಲಿ ಏಕಕಾಲಕ್ಕೆ 2 ಅಥವಾ 2ಕ್ಕಿಂತ ಹೆಚ್ಚು ಕೊವಿಡ್-19 ಪ್ರಕರಣಗಳು ವರದಿಯಾದಲ್ಲಿ ಅದನ್ನು ಕ್ಲಸ್ಟರ್ ಎಂದು ಗುರುತಿಸಿಕೊಳ್ಳಲಾಗುತ್ತಿದೆ. ಅದರ ಸುತ್ತಮುತ್ತಲಿನ ಪ್ರದೇಶವನ್ನು ಕಂಟೇನ್ಮೆಂಟ್ ವಲಯ ಎಂದು ಘೋಷಿಸಲಾಗುತ್ತದೆ. ಈ ರೀತಿಯಾಗಿ ಕಂಟೇನ್ಮೆಂಟ್ ವಲಯಗಳ ಸಂಖ್ಯೆ 160ಕ್ಕಿಂತ ಹೆಚ್ಚಾಗಿದೆ. ಶೇ.50ರಷ್ಟು ಅಂದರೆ 79 ಅಪಾರ್ಟ್ ಮೆಂಟ್ ಹಾಗೂ ಕಾಂಪ್ಲೆಕ್ಸ್ ಗಳು ಅದೇ ಕಂಟೇನ್ಮೆಂಟ್ ವಲಯಗಳಲ್ಲಿರುವುದು ಗೊತ್ತಾಗಿದೆ. ಹೀಗಾಗಿ ಕಟ್ಟುನಿಟ್ಟಿನ ನಿಮಯಗಳನ್ನು ಪಾಲನೆ ಮಾಡುವಂತೆ ಮಾರ್ಗಸೂಚಿಯಲ್ಲಿ ತಿಳಿಸಿಲಾಗಿದೆ.

 

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...