ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ!

Date:

ದೇಶದಲ್ಲಿ ಮುಂಗಾರು ಪ್ರಭಾವ ಮುಂದುವರೆದಿದ್ದು, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಜಾರ್ಖಂಡ್, ಆಂಧ್ರ ಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಡ ಹಾಗೂ ವಿದರ್ಭಾದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈಶಾನ್ಯ ಭಾರತದಲ್ಲಿ ಇನ್ನೂ ಕೆಲವು ದಿನ ಮಳೆಯಾಗಲಿದೆ. ಹಿಮಾಲಯ, ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲಿ ನಾಲ್ಕೈದು ದಿನಗಳ ಕಾಲ ಅಧಿಕ ಪ್ರಮಾಣದ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಅಸ್ಸಾಂ ಹಾಗೂ ಮೇಘಾಲಯದಲ್ಲಿ ಆಗಸ್ಟ್ 16 ಹಾಗೂ 17ರಂದು ಅಧಿಕ ಮಳೆಯಾಗಲಿದೆ. ಅರುಣಾಚಲ ಪ್ರದೇಶದಲ್ಲಿ ಆಗಸ್ಟ್‌ 17ರಂದು ಹಾಗೂ ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ ಹಾಗೂ ತ್ರಿಪುರಾದಲ್ಲಿ ಆಗಸ್ಟ್‌ 16ರಂದು ಹೆಚ್ಚಿನ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಮಳೆ ಇನ್ನೆರಡು ದಿನ ಮುಂದುವರೆಯುವುದಾಗಿ ತಿಳಿಸಿದೆ.

ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಜಾರ್ಖಂಡ್, ಆಂಧ್ರದ ಕರಾವಳಿ ಪ್ರದೇಶಗಳು, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಡ ಹಾಗೂ ವಿದರ್ಭಾದಲ್ಲಿ ಮುಂದಿನ ಐದು ದಿನಗಳವರೆಗೂ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ರವಾನಿಸಿದೆ.

Share post:

Subscribe

spot_imgspot_img

Popular

More like this
Related

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...