ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿಂದು ಖಾದ್ಯ ತೈಲದ ರಾಷ್ಟ್ರೀಯ ಅಭಿಯಾನದಲ್ಲಿ – ಆಯಿಲ್ ಪಾಮ್ ಜಾರಿಗೆ ಸಂಪುಟದ ಅನುಮೋದನೆ ಸಿಕ್ಕಿದೆ. ಈ ಯೋಜನೆಯು ತೈಲ ತಾಳೆ ಬೆಳೆಗಾರರಿಗೆ ಅಪಾರ ಪ್ರಯೋಜನ ನೀಡುತ್ತದೆ, ಬಂಡವಾಳ ಹೂಡಿಕೆಯನ್ನು ಹೆಚ್ಚಿಸುತ್ತದೆ, ಉದ್ಯೋಗ ಸೃಷ್ಟಿಸುತ್ತದೆ, ಆಮದು ಅವಲಂಬನೆಯನ್ನು ತಗ್ಗಿಸುತ್ತದೆ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ. ಜೊತೆಗೆ ಅಡುಗೆ ಎಣ್ಣೆ ಬೆಲೆ ಇಳಿಕೆ ಬಗ್ಗೆ ನಿರೀಕ್ಷೆ ಹುಟ್ಟಿಸಿದೆ.

ಈಶಾನ್ಯ ವಲಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ವಿಶೇಷ ಗಮನ ಕೇಂದ್ರೀಕರಿಸಿ ಹೊಸ ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಖಾದ್ಯ ತೈಲಗಳ ರಾಷ್ಟ್ರೀಯ ಅಭಿಯಾನ – ಆಯಿಲ್ ಪಾಮ್ (ಎನ್.ಎಂ.ಇ.ಒ-ಒಪಿ) ಎಂದು ಕರೆಯಲಾಗುವ ತೈಲ ತಾಳೆ (ಆಯಿಲ್ ಪಾಮ್) ಆರಂಭಿಸಲು ತನ್ನ ಅನುಮೋದನೆ ನೀಡಿದೆ.
ಖಾದ್ಯ ತೈಲಗಳ ಆಮದಿನ ಮೇಲೆ ಭಾರಿ ಅವಲಂಬನೆಯಿಂದಾಗಿ, ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವ ಪ್ರಯತ್ನ ಮಾಡುವುದು ಮುಖ್ಯವಾಗಿದ್ದು, ತೈಲ ತಾಳೆಯ ಬೆಳೆ ಪ್ರದೇಶದ ಹೆಚ್ಚಳ ಮತ್ತು ಉತ್ಪಾದಕತೆಯು ಪ್ರಮುಖ ಪಾತ್ರ ವಹಿಸುತ್ತದೆ.